ತಡವಲಗಾದಲ್ಲಿ ಮಕ್ಕಳು ಅಸ್ವಸ್ಥ ಪ್ರಕರಣ, ವಾರದಲ್ಲಿ ವರದಿ ನೀಡಲು ಸೂಚನೆ, ಸಿಇಒ ರಾಹುಲ್ ಶಿಂಧೆ ರಚಿಸಿದ ತಂಡದಲ್ಲಿ ಯಾರಿದ್ದಾರೆ ಗೊತ್ತಾ?
ಸರಕಾರ್ ನ್ಯೂಸ್ ವಿಜಯಪುರ
ವಿಷಾಹಾರ ಸೇವನೆಯಿಂದ ವಸತಿ ಶಾಲೆ ಮಕ್ಕಳು ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದಾರೆ.
ಇಂಡಿ ತಾಲೂಕಿನ ತಡವಲಗಾ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯ ಸುಮಾರು 19 ಮಕ್ಕಳು ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಪಂ ಸಿಇಒ ರಾಹುಲ್ ಶಿಂಧೆ ತನಿಖೆಗೆ ವಿಶೇಷ ತಂಡ ರಚಿಸಿದ್ದಾರೆ.
ಜಿಲ್ಲಾ ಸರ್ವೇಕ್ಷಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ಇರ್ದೇಶಕ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ, ತಾಲೂಕು
ವೈದ್ಯಾಧಿಕಾರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಿದ್ದಾರೆ.
ತಡವಲಗಾದ ಕಸ್ತೂರ ಬಾ ವಸತಿ ಶಾಲೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಖುದ್ದಾಗಿ
ಭೇಟಿ ನೀಡಿ ಅಸ್ವಸ್ಥರಾಗಲು ಕಾರಣ ಏನು? ಎಷ್ಟು ಮಕ್ಕಳು, ಎಷ್ಟು ಹೊತ್ತಿಗೆ? ಅಸ್ವಸ್ಥರಾಗಿದ್ದಾರೆ. ಇದಕ್ಕೆ ಕಾರಣ ಏನೆಂಬುದು ತಿಳಿದು ವಾರದೊಳಗೆ ವರದಿ ನೀಡಲು ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.