ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ನರಳಾಟ ಪ್ರಕರಣ, ಲೋಕಾಯುಕ್ತದಿಂದ ಬಿಗ್ ಶಾಕ್ !
ಸರಕಾರ್ ನ್ಯೂಸ್ ವಿಜಯಪುರ
ರಾಜ್ಯ ಮಟ್ಟದ ಕಾಯಕಲ್ಪ ಪ್ರಶಸ್ತಿ ವಿಜೇತ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಈಚೆಗೆ ಘಟಿಸಿ ಬಾಣಂತಿಯರ ನರಳಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ತನಿಖೆಗೆ ಆದೇಶಿಸಿದೆ.
ಮೇ 17 ರಂದು ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ 21 ಬಾಣಂತಿಯರ ಸಿಜೇರಿಯನ್ ಹೊಲಿಗೆ ಬಿಚ್ಚಿಕೊಂಡು ಸೋಂಕು ಕಾಣಿಸಿಕೊಂಡಿತ್ತು. ಇದು ರಾಜ್ಯಮಟ್ಟದಲ್ಲಿ ಸುದ್ದಿ ಆಗಿತ್ತು. ಉಪ ಲೋಕಾಯುಕ್ತ ಬಿ.ಎಸ್. ಪಾಟೀಲ ಭೇಟಿ ನೀಡಿ ಪರಿಶೀಲಿಸಿದ್ದರು.
ಜೂ.6ರಂದು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಯು/ಎಸ್, 7(2) ಮತ್ತು 9(3)(ಎ) ನೇದ್ಧರಡಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್, ಶಸ್ತ್ರ ಚಿಕಿತ್ಸಕ ಡಾ.ಸಂಗಣ್ಣ ಲಕ್ಕಣ್ಣವರ, ರೆಸಿಡೆಂಟ್ ಮೆಡಿಕಲ್ ಆಫೀಸರ್ ಡಾ.ಎ.ಜಿ.ಬಿರಾದಾರ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಉಪ ಲೋಕಾಯುಕ್ತರ ನಿರ್ದೇಶನಗಳನ್ನು ನಿರ್ಧಿಷ್ಟ ಕಾಲಾವಧಿಯಲ್ಲಿ ಅನುಷ್ಠಾನಗೊಳಿಸಿ, ಅನುಸರಣಾ ವರದಿ ನೀಡುವಂತೆ ಆದೇಶಿಸಿರುವುದಾಗಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.