ತಡವಲಗಾ ಮಕ್ಕಳ ಅಸ್ವಸ್ಥ ಪ್ರಕರಣ, ಐವರು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು, ವೈದ್ಯರಿಗೆ ಡಿಸಿ ಹೇಳಿದ್ದೇನು ಗೊತ್ತಾ?
ಸರಕಾರ್ ನ್ಯೂಸ್ ವಿಜಯಪುರ
ಆಹಾರ ಸೇವನೆಯಿಂದ ಅಸ್ವಸ್ಥರಾಗಿದ್ದಾರೆಂದು
ಇಂಡಿ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂಡಿ ತಾಲೂಕಿನ ತಡವಲಗಾ ಗ್ರಾಮದ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ವಿದ್ಯಾಲಯದ ವಿದ್ಯಾರ್ಥಿಗಳ
ಪೈಕಿ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ಜೂನ್ 8ರ ಸಂಜೆ 5 ಗಂಟೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 5 ಜನ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಲು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಜೂನ್ 9ರಂದು ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿನಿಯರನ್ನು ಖುದ್ದು ಮಾತನಾಡಿಸಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಐವರೂ ವಿದ್ಯಾರ್ಥಿನಿಯರ ಆರೋಗ್ಯದ ಮೇಲೆ ತೀವ್ರ ನಿಗಾ ಇಡಬೇಕು ಎಂದು ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾದ ಡಾ.ಎಲ್.ಎಸ್.ಲಕ್ಕಣ್ಣವರ ಹಾಗೂ ಇನ್ನೀತರರು ಇದ್ದರು.