ವಿಜಯಪುರ

ಸಿಂದಗಿಯಲ್ಲಿ ಬಿಸಿಯೂಟ ಅಕ್ಕಿ ಅಕ್ರಮ ಮಾರಾಟ, ಶಾಲೆಗೆ ಭೇಟಿ ನೀಡಿದ ಬಿಇಒಗೆ ಗ್ರಾಮಸ್ಥರು ಹೇಳಿದ್ದೇನು?

ಸರಕಾರ್ ನ್ಯೂಸ್ ವಿಜಯಪುರ

ಶಾಲಾ‌ ವಿದ್ಯಾರ್ಥಿಗಳ ಬಿಸಿಯೂಟದ ಅಕ್ಕಿ ಅಕ್ರಮ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಶನಿವಾರ ಬಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಗ್ರಾಮಸ್ಥರ ವಾಹನ ತಡೆದು ಆಕ್ರೋಶ ಹೊರಹಾಕಿದ್ದರು.

ಶಾಲಾ ಮುಖ್ಯಶಿಕ್ಷಕ ಶರಣಪ್ಪ ಬಿದನೂರ ಬಿಸಿಯೂಟದ ಅಕ್ಕಿ ಸಾಗಾಟ ಮಾಡಿ ಮಾರಾಟ ಮಾಡುತ್ತಾರೆಂದು ಗ್ರಾಮಸ್ಥರು ಆರೋಪ ಮಾಡಿದ್ದರು.

ತನ್ನಿಮಿತ್ತ ಶನಿವಾರ ಬಿಇಒ ಎಸ್.ಎಸ್. ನಾಗನೂರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮಸ್ಥರ ಬಳಿ ಮಾಹಿತಿ ಕಲೆ ಹಾಕಿದರು. ಈ ವೇಳೆ
ಮುಖ್ಯಶಿಕ್ಷಕ ಶರಣಪ್ಪ ಬಿದನೂರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರ ಒತ್ತಾಯಿಸಿದರು.

error: Content is protected !!