ವಿಜಯಪುರ ಶಾಂತಿ ಸೌಹಾರ್ದತೆ ನಾಡು, ಪ್ರಚೋದನಕಾರಿ ಹೇಳಿಕೆ ನೀಡಿದರೆ ಹುಷಾರ್, ಎಸ್ ಪಿ ಆನಂದಕುಮಾರ ಖಡಕ್ ವಾರ್ನ್
ಸರಕಾರ್ ನ್ಯೂಸ್ ವಿಜಯಪುರ
ದೇಶ ಹಾಗೂ ರಾಜ್ಯಾದ್ಯಂತ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಯಾರೇ ಪ್ರಚೋದನಕಾರಿ ಹೇಳಿಕೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ ಪಿ ಆನಂದಕುಮಾರ ಎಚ್ಚರಿಸಿದರು.
ಜಿಲ್ಲೆಯ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಎಲ್ಲ ಸಮುದಾಯಗಳ ಮುಖಂಡರನ್ನು ಕರೆಯಿಸಿ ಶಾಂತಿ ಸೌಹಾರ್ದ ಸಭೆ ನಡೆಸಲಾಗಿದೆ.
ಯಾವುದೇ ಅಹಿತಕಾರಿ ಘಟನೆಗೆ ಪ್ರಚೋದನೆ ನೀಡುವುದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಯಾರೂ ಪ್ರಚೋದನಕಾರಿ ಪೋಸ್ಟ್ ಮಾಡಬಾರದರು. ಈಗಾಗಲೇ ಸೋಶಿಯಲ್ ಮೀಡಿಯಾ ನಿಯಂತ್ರಣ ಘಟಕ ಸ್ಥಾಪಿಸಲಾಗಿದ್ದು ಆ ಮೂಲಕ ನಿಗಾ ಇರಿಸಲಾಗಿದೆ. ಯಾರೇ ಕೋಮು ಸೌಹಾರ್ದ ಕೆಡಿಸಲು ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಜಯಪುರ ಶಾಂತಿ ಸೌಹಾರ್ದ ತೆ ಕಾಪಾಡಿಕೊಂಡೇ ಬಂದಿದೆ. ಇನ್ನು ಮುಂದೆಯೂ ಶಾಂತಿ ಕಾಪಾಡಿಕೊಂಡು ಹೋಗಬೇಕೆಂದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸಹ ಶಾಂತಿ ಸೌಹಾರ್ದತೆಗೆ ಧಕ್ಕೆಯಾಗದ ರೀತಿ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.