ವಿಧಾನ ಪರಿಷತ್ ಚುನಾವಣೆ, ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಪೂರ್ಣ, ಮತದಾನ ಪ್ರಕ್ರಿಯೆ ಕುರಿತ ವಿವರ ಇಲ್ಲಿದೆ ನೋಡಿ
ಸರಕಾರ್ ನ್ಯೂಸ್ ವಿಜಯಪುರ
ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಜೂ.13 ರಂದು ನಡೆಯಲಿದ್ದು ಈಗಾಗಲೇ ಸಕಲ ಸಿದ್ದತೆ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 47 ಮತಗಟ್ಟೆ ಸ್ಥಾಪಿಸಲಾಗಿದೆ. ಮೂಲ 40 ಇದ್ದು ಹೆಚ್ಚುವರಿಯಾಗಿ 7 ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಶಿಕ್ಷಕರ ಕ್ಷೇತ್ರದಿಂದ 12 ಹಾಗೂ ಪದವೀಧರ ಕ್ಷೇತ್ರದಿಂದ 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರಕ್ಕೆ
ಳ 6928 ಮತದಾರರಿದ್ದಾರೆ. ಇದರಲ್ಲಿ 4985 ಗಂಡು ಹಾಗೂ 1943 ಮಹಿಳೆಯರಿದ್ದಾರೆ.
ಪದವೀಧರ ಕ್ಷೇತ್ರದಲ್ಲಿ 20823 ಮತದಾರಿದ್ದು, ಇದರಲ್ಲಿ 15722 ಗಂಡು, 5100 ಹೆಣ್ಣು ಹಾಗೂ 1 ಇತರೆ ಮತದಾರರಿದ್ದಾರೆ ಎಂದರು.
ಜೂ. 13 ರಂದು ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಕ್ಕೆ ಏಕಕಾಲಕ್ಕೆ ಮತದಾನ ನಡೆಯುವುದರಿಂದ
ಚುನಾವಣೆ ಆಯೋಗದ ನಿರ್ದೇಶನದ ಪ್ರಕಾರ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದ ಶಾಹಿಯನ್ನು ಬಲಗೈ ಮದ್ಯದ ಬೆರಳಿಗೆ ಹಾಗೂ ಪದವೀಧರ ಕ್ಷೇತ್ರದ ಮತದಾರರಿಗೆ ಬಲಗೈ ತೋರುಬೆರಳಿಗೆ ಶಾಹಿ ಹಾಕಲಾಗುವುದು ಎಂದರು.
ಸರ್ಕಾರದ ಅಧಿಸೂಚನೆಯಂತೆ ಸರ್ಕಾರಿ, ಖಾಸಗಿ ಶಾಲೆ ಕಾಲೇಜ್ ಗಳು ಹಾಗೂ ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳ, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳ, ಕೇಂದ್ರ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು, ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳ ಲ್ಲಿ, ಎಲ್ಲ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತುಬಿತರ ಎಸ್ಟಾಬ್ಲಿಷ್ ಮೆಂಟ್ ಗಳಲ್ಲಿ ಕಾಯಂ ಅಥವಾ ದಿನಗೂಲಿ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ ಎಂದರು.
ಮತದಾರರಿಗೆ ಅನುಕೂಲ ವಾಗುವಂತೆ ವೋಟರ್ ಇನ್ಫಾರ್ಮೇಶನ್ ಥ್ರೋಟ್ ಎಸ್ ಎಂಎಸ್ ವ್ಯವಸ್ಥೆ ಸಿದ್ದಪಡಿಸಲಾಗಿದೆ ಎಂದರು.
ಆಯಾ ತಹಸೀಲ್ದಾರ್ ಕಚೇರಿಗಳಲ್ಲಿ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 34 ರೂಟ್ ಗಳಿದ್ದು ಒಟ್ಟು 40 ವಾಹನ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಪ್ರತಿ ಮತಗಟ್ಟೆಗೆ ಒಟ್ಟು 5 ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಪಿಆರ್ ಒ- 47, ಎಪುಆರ್ ಒ- 47, ಪಿಒ- 142 ಹಾಗೂ ಕಾಯ್ದಿಟ್ಟ ಸಿಬ್ಬಂದಿ- 80 ನಿಯೋಜಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 47 ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್ ನಿಯೋಜನೆ ಮಾಡಲಾಗಿದೆ. ಪ್ರತಿ ಮತಗಟ್ಟೆಗಳಿಗೆ 2 ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.
ಪೊಲೀಸ್ ಬಂದೋಬಸ್ತ್:
ಎಸ್ ಪಿ ಆನಂದಕುಮಾರ ಮಾತನಾಡಿ, ಜಿಲ್ಲೆಯಲ್ಲಿ 29 ಸಾಮಾನ್ಯ ಮತಗಟ್ಟೆ ಇದ್ದು, 15 ಸೂಕ್ಷ್ಮ ಮತಗಟ್ಟೆಗಳು, 3 ಅತೀ ಸೂಕ್ಷ್ಮ ಮತಗಟ್ಟೆಗಳಿದ್ದು 17 ಮತಗಟ್ಟೆಗಳಲ್ಲಿ ವೆಬ್ ಕ್ಯಾಮೆರಾ ಅಳವಡಿಸಲಾಗಿದೆ. 6 ಮತಗಟ್ಟೆಗಳಿಗೆ ವಿಡಿಯೋ ಗ್ರಾಫರ್ ಗಳನ್ನು ನೇಮಕ ಮಾಡಲಾಗಿದೆ ಎಂದರು.
ಒಟ್ಟು 47 ಮತಗಟ್ಟೆಗಳಿಗೆ ಡಿವೈಎಸ್ ಪಿ-3, ಸಿಪಿಐ- 11, ಪಿಎಸ್ ಐ -16,
ಎಎಸ್ ಐ -18, ಸಿಎಚ್ ಸಿ- 80, ಸಿಪಿಸಿ- 193, ಡಿಎಆರ್ ತುಕುಡಿ- 12 ಹಾಗೂ ಕೆಎಸ್ ಆರ್ ಪಿ ತುಕುಡಿ – 3 ನೇಮಿಸಲಾಗಿದೆ ಎಂದರು.
ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಎಲ್ಲ ಸಾಮಗ್ರಿಗಳನ್ನು ಬೆಳಗಾವಿಯ ಜ್ಯೋತಿ ಕಾಲೇಜ್ ಕ್ಲಬ್ ರಸ್ತೆಯ ಭದ್ರತಾ ಕೊಠಡಿಯಲ್ಲಿ ಇರಿಸಲಾಗುವುದು ಎಂದರು.