ಆರ್‌ಟಿಒ ಕಚೇರಿಗೆ ಲೋಕಾಯುಕ್ತರ ದಿಢೀರ್ ಭೇಟಿ, ಅಧಿಕಾರಿಗಳಿಗೆ ನೀಡಿದ ಖಡಕ್ ವಾರ್ನಿಂಗ್ ಏನು ಗೊತ್ತಾ?
ಸರಕಾರ್ ನ್ಯೂಸ್ ವಿಜಯಪುರ
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಶುಕ್ರವಾರ ದಿಢೀರನೆ ಆರ್‌ಟಿಒ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.
ಇಲ್ಲಿನ ಬಾಗಲಕೋಟೆ ರಸ್ತೆಯಲ್ಲಿರುವ ಆರ್‌ಟಿಒ ಕಚೇರಿಗೆ ಭೇಟಿ ನೀಡಿದ ಅವರು, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಚೆಕ್ ಪೋಸ್ಟ್‌ಗಳಲ್ಲಿ ತೀವ್ರ ಸಮಸ್ಯೆ ಎದುರಾಗಿದೆ ಎಂದು ಮಾಹಿತಿ ಕೇಳಿ ಬರುತ್ತಿದೆ. ಆ ಕುರಿತು ದೂರು ಬಂದರೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಾತ್ರವಲ್ಲ, ಕಡ್ಡಾಯ ಕಚೇರಿಗೆ ಮತ್ತು ಚೆಕ್‌ಪೋಸ್ಟ್‌ಗೆ ಹಾಜರಾಗಬೇಕು. ಬೇಕಾಬಿಟ್ಟಿಯಾಗಿ ಅಧಿಕಾರಿಗಳು ಬರೋದು ಹೋಗೋದು ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಪ್ರತಿ ತಿಂಗಳ ವಾಹನ ನೋಂದಣಿ ಹಾಗೂ ಇತರೆ ಮಾಹಿತಿ ಲೋಕಾಯುಕ್ತ ಕಚೇರಿಗೆ ಸಲ್ಲಿಸಬೇಕೆಂದು ಖಡಕ್ ಸೂಚನೆ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಳ್ಳಿ ಹಾಗೂ ಲೋಕಾಯುಕ್ತ ಎಸ್‌ಪಿ ಅನಿತಾ ಹದ್ದಣ್ಣವರ ಮತ್ತಿತರರಿದ್ದರು.