ನೋಡು ನೋಡುತ್ತಲೇ ಕಣ್ಮರೆಯಾದ ಸೇತುವೆ, ಸೊಗಲಿ ಹಳ್ಳದಲ್ಲಿ ಕೊಚ್ಚಿ ಹೋದ ಸೇತುವೆ, ನೋಡು ನೋಡುತ್ತಲೇ ನೀರು ಪಾಲಾಗಿದ್ದು ಹೇಗೆ ಗೊತ್ತಾ?
ಸರ್ಕಾರ್ ನ್ಯೂಸ್ ವಿಜಯಪುರ
ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳೆಲ್ಲ ತುಂಬಿ ಹರಿಯುತ್ತಿದ್ದು ಸೇತುವೆಯೊಂದು ಕೊಚ್ಚಿಕೊಂಡು ಹೋಗಿದೆ.
ತಾಳಿಕೋಟಿ ತಾಲೂಕಿನ ಮೂಕಿಹಾಳ- ಸೋಗಲಿ ಮದ್ಯದ ಹಳ್ಳದ ಸೇತುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.
ಸತತ ಎರಡ್ಮೂರು ದಿನಗಳ ಕಾಲ ಸುರಿದ ಮಳೆಯಿಂದ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ನೀರಿನ ರಭಸಕ್ಕೆ ಹಂತ ಹಂತವಾಗಿ ಕುಸಿದು ಇದ್ದ ಸೇತುವೆ ಕ್ರಮೇಣ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದೆ.
ಈ ದೃಶ್ಯಾವಳಿಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಮಾತ್ರವಲ್ಲ ಅದರ ರೋಮಾಂಚಕ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸೇತುವೆ ಕುಸಿತದಿಂದಾಗಿ ಸಾರಿಗೆ ಸಂಪರ್ಕ ಸ್ಥಗಿತ ಗೊಳಿಸಲಾಗಿದೆ.