ನಮ್ಮ ವಿಜಯಪುರ

ಕೃಷ್ಣೆಯ ಜಲಧಿಗೆ ಗಂಗಾಪೂಜೆ, ಆಲಮಟ್ಟಿ ಜಲಾಶಯದಲ್ಲಿ ಬಾಗಿನ ಅರ್ಪಣೆ, ಹಳದಿ ರೇಷ್ಮೆ ರುಮಾಲು ಸುತ್ತಿ ಕಂಗೊಳಿಸಿದ ಸಿಎಂ ಬೊಮ್ಮಾಯಿ

ಸರಕಾರ್ ನ್ಯೂಸ್ ಆಲಮಟ್ಟಿ

ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಸಿಎಂ ಬಸವರಾಜ ಬೊಮ್ಮಾಯಿ ತಡವಾಗಿಯಾದರೂ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದ್ದಾರೆ.

ಆಗಸ್ಟ್ ನಲ್ಲಿಯೇ ಕೃಷ್ಣೆಗೆ ಬಾಗಿನ ಅರ್ಪಿಸಬೇಕಿದ್ದು ಕಾರಣಾಂತರಗಳಿಂದಾಗಿ ಮುಂದೂಡಲ್ಪಟ್ಟಿತ್ತು. ಇದೀಗ ಶುಕ್ರವಾರ ಬೆಳಗ್ಗೆ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರೀ ಜಲಾಶಯದ ಹಿನ್ನೀರಿನಲ್ಲಿ ಸಾಂಪ್ರದಾಯಿಕವಾಗಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಉತ್ತರ ಕರ್ನಾಟಕದ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಹಳದಿ ರೇಷ್ಮೆ ರುಮಾಲು ಸುತ್ತಿ ಬಾಗಿನ ಅರ್ಪಿಸಿದ್ದು ವಿಶೇಷವಾಗಿತ್ತು. ಇವರೊಂದಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಹ ರೇಷ್ಮೆ ರುಮಾಲು ಸುತ್ತಿದ್ದು ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಎತ್ತಿ ತೋರಿಸಿದಂತಾಯಿತು. ಸಚಿವ ಸಿ.ಸಿ. ಪಾಟೀಲ,
ಶಾಸಕರಾದ ಶಿವಾನಂದ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಎ.ಎಸ್. ಪಾಟೀಲ ನಡಹಳ್ಳಿ, ಸಂಸದ ರಮೇಶ ಜಿಗಜಿಣಗಿ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಮತ್ತಿತರರಿದ್ದರು.

error: Content is protected !!