ಶಾಸಕ ಯತ್ನಾಳ- ಅಪ್ಪು ಪಟ್ಟಣಶೆಟ್ಟಿ ಮುಖಾಮುಖಿ, ಖಾಸಗಿ ಹೋಟೆಲ್ ನಲ್ಲಿ ಮಹತ್ವದ ಸಭೆ, ಕಾರಣ ಏನು ಗೊತ್ತಾ?
ಸರಕಾರ್ ನ್ಯೂಸ್ ವಿಜಯಪುರ
ಮಹಾನಗರ ಪಾಲಿಕೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ನಾಯಕರು ತಮ್ಮ ಎಲ್ಲ ಅಸಮಾಧಾನಗಳನ್ನು ಬದಿಗೊತ್ತಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಸದಾ ಹಾವು ಮುಂಗುಸಿಯಂತೆ ಜಗಳವಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಒಟ್ಟಾಗಿ ಭಾಗವಹಿಸಿ ಕುತೂಹಲ ಮೂಡಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಸಂಜೆ
ಕಡುಚಿ ಶಾಸಕ ಪಿ.ರಾಜೀವ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಚಂದ್ರಶೇಖರ ಕವಟಗಿ ಭಾಗವಹಿಸಿದ್ದರು.
ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಪ್ರಚಾರ, ಮತಗಟ್ಟೆಗಳಿಗೆ ಪರಿಚಾರಕರ ನೇಮಕ, ಅಭಿವೃದ್ಧಿ ಕಾರ್ಯಕ್ರಮಗಳ ಜನಜಾಗೃತಿ ಹೀಗೆ ಹತ್ತು ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ, ಎಲ್ಲರ ಸಹಮತದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲು ಒಮ್ಮತದ ನಿರ್ಧಾರಕ್ಕೆ ಬರಲಾಯಿತೆಂದು ಸಭೆಯ ಪ್ರಕಟಣೆ ತಿಳಿಸಿದೆ.