ಪಾಲಿಕೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಅಂತೂ ಬಿಡುಗಡೆ, ಕಮಲ ಪಾಳಯದ ಹುರಿಯಾಳು ಯಾರು ಗೊತ್ತಾ?
ಸರಕಾರ್ ನ್ಯೂಸ್ ವಿಜಯಪುರ
ತೀವ್ರ ಕುತೂಹಲ ಕೆರಳಿಸಿರುವ ಮಹಾನಗರ ಪಾಲಿಕೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಕೊನೇ ಕ್ಷಣದಲ್ಲಿ ಪ್ರಕಟಿಸುವ ಮೂಲಕ ಬಿಜೆಪಿ ಅಚ್ಚರಿ ಹುಟ್ಟಿಸಿದೆ.
ಅ. 10 ರಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದರೂ ಅಂತಿಮ ದಿನದವರೆಗೂ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿರಲಿಲ್ಲ. ಅಂತಿಮ ದಿನವಾದ ಅ. 17 ರಂದು ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದ ನಂತರವೂ ಬಿಜೆಪಿ ಅಳೆದು ತೂಗಿ ಅಭ್ಯರ್ಥಿ ಘೋಷಣೆ ಮಾಡಿದೆ. ನಾಮಪತ್ರ ಸಲ್ಲಿಕೆ ಅವಧಿ ಅರ್ಧ ಗಂಟೆ ಬಾಕಿ ಇರುವಾಗಲೇ ಅಭ್ಯರ್ಥಿ ಪಟ್ಟಿ ಘೋಷಣೆ ಮಾಡಿದೆ. ಅಂದ ಹಾಗೆ ಅಭ್ಯರ್ಥಿಗಳ ವಿವರವುಳ್ಳ ಪಟ್ಟಿ ಇಲ್ಲಿದೆ ನೋಡಿ.