ಮಹಾನಗರ ಪಾಲಿಕೆ ಚುನಾವಣೆ, ಬಿಜೆಪಿಗೆ ಎಷ್ಟು ಸ್ಥಾನದಲ್ಲಿ ಗೆಲುವು? ಅಧ್ಯಕ್ಷ ಕೂಚಬಾಳ ಹೇಳಿದ್ದೇನು ಗೊತ್ತಾ?
ಸರಕಾರ್ ನ್ಯೂಸ್ ವಿಜಯಪುರ
ಬರುವ 2023ರ ವಿಧಾನ ಸಭೆ ಚುನಾವಣೆ ಮುಂದಿಟ್ಟುಕೊಂಡು ನಡೆಯುತ್ತಿರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ವಿಶ್ವಾಸ ವ್ಯಕ್ತಪಡಿಸಿದರು.
ಒಟ್ಟು 35 ವಾರ್ಡ್ ಗಳ ಪೈಕಿ 33 ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಎಲ್ಲ ಸಮುದಾಯಗಳಿಗೆ ಆದ್ಯತೆ ನೀಡಲಾಗಿದ್ದು ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಎಲ್ಲ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಬಿಜೆಪಿ ಆಡಳಿತಾವಧಿಯಲ್ಲಿ ವಿಜಯಪುರ ನಗರ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ. ಈ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತದಾರರ ಮುಂದೆ ಹೋಗುತ್ತಿದ್ದು ಮತದಾರರು ಈ ಬಾರಿ ಪಕ್ಷದ ಕೈ ಹಿಡಿಯುವ ವಿಶ್ವಾಸ ಇದೆ ಎಂದರು.
ಬಂಡಾಯವಾಗಿ ಕಣಕ್ಕಿಳಿದವರ ಮನವೊಲಿಸುವ ಕಾರ್ಯವಾಗಿದೆ. ಹೀಗಾಗಿ ಬಹಳಷ್ಟು ಜನ ನಾಮಪತ್ರ ಹಿಂಪಡೆದಿದ್ದಾರೆ ಎಂದರು.
ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಮಲ್ಲಿಕಾರ್ಜುನ ಜೋಗೂರ, ಪಾಪುಸಿಂಗ ರಜಪೂತ, ಭರತ ಕೋಳಿ, ಗಾಯಕವಾಡ, ವಿಜಯ ಜೋಶಿ ಮತ್ತಿತರರಿದ್ದರು.