ನಮ್ಮ ವಿಜಯಪುರ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಸಹಾಯ ಧನಕ್ಕೆ ಅರ್ಜಿ ಆಹ್ವಾನ

ಸರಕಾರ್‌ ನ್ಯೂಸ್‌ ವಿಜಯಪುರ 

ಮೀನುಗಾರಿಕೆ ಇಲಾಖೆಯಿಂದ  2022-23 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಯೋಜನೆಗಳ ಸಹಾಯಧಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಬಯೋಫ್ಲಾಕ್‌ ಕೊಳ ನಿರ್ಮಾಣ, ಮೀನು ಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಅಲಂಕಾರಿಕ ಮೀನು ಉತ್ಪಾದಕ ಘಟಕ, ಆರ್‌ಎಎಸ್‌ ಘಟಕ ಸ್ಥಾಪನೆ, ಶೈತೀಕರಿಸಿದ ಶಾಖ ನಿರೋಧಕ ವಾಹನ ಖರೀದಿ, ಶೈತ್ಯೆಗಾರ-ಮಂಜುಗಡ್ಡೆ ಸ್ಥಾವರ ನಿರ್ಮಾಣ ಮತ್ತು ಇತರೆ ಯೋಜನೆಗಳಿಗೆ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.40ರಷ್ಟು ಸಹಾಯಧನ ನೀಡಲಾಗುವುದು.

ಈ ಯೋಜನೆಯಡಿ ಅರ್ಜಿ ಸಲ್ಲಿಸಲು ದಿನಾಂ.5/11/2022 ಕೊನೆಯ ದಿನವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

error: Content is protected !!