ಉತ್ಪಾದನೆಕೈಗಾರಿಕೆಕೊಪ್ಪಳರಾಜ್ಯ ಸುದ್ದಿ

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಅರ್ಜಿ ಆಹ್ವಾನ

ಕೊಪ್ಪಳ, 2021-22ನೇ ಸಾಲಿನ ಗ್ರಾಮೀಣ ಭಾಗದ ವೃತ್ತಿ ನಿರತ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಬಡಗಿತನ, ಕ್ಷೌರಿಕ ಹಾಗೂ ದೋಬಿ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು, ಅರ್ಹ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಪರಿಶಿಷ್ಟ ಜಾತಿಗೆ 06 ಹಾಗೂ ಪರಿಶಿಷ್ಟ ಪಂಗಡಕ್ಕೆ 05 ಗುರಿಗಳನ್ನು ನಿಗದಿಪಡಿಸಲಾಗಿದೆ. ಅರ್ಜಿಗಳನ್ನು ಫೆ.28 ರಿಂದ ಮಾರ್ಚ್ 07 ರವರೆಗೆ ಉಪ ನಿರ್ದೇಶಕರು(ಖಾ.ಗ್ರಾ) ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್ ಕೊಪ್ಪಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಮಾರ್ಚ್ 09 ರೊಳಗೆ ಕಚೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕೈಗಾರಿಕಾ ವಿಸ್ತರಣಾಧಿಕಾರಿಗಳು ಕೊಪ್ಪಳ, ಯಲಬುರ್ಗಾ, ಕುಕನೂರು-8497060159, ಕುಷ್ಟಗಿ, ಗಂಗಾವತಿ, ಕನಕಗಿರಿ, ಕಾರಟಗಿ-8660204752 ಗೆ ಸಂಪರ್ಕಿಸಬಹುದು ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕರು(ಖಾ.ಗ್ರಾ) ತಿಳಿಸಿದ್ದಾರೆ.

error: Content is protected !!