ಕಲಬುರಗಿಯಲ್ಲಿ ಬಿಜೆಪಿ ವಿರಾಟ ಸಮಾವೇಶ, ಏನಿದರ ವಿಶೇಷ?
ಸರಕಾರ್ ನ್ಯೂಸ್ ವಿಜಯಪುರ
ಹಿಂದುಳಿದ ವರ್ಗದ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದ ಯೋಜನೆಗಳ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಅ.30 ರಂದು ಕಲಬುರಗಿಯಲ್ಲಿ ಬೃಹತ್ ಜನಜಾಗೃತಿ ಹಾಗೂ ವಿರಾಟ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 200 ಎಕರೆ ವಿಸ್ತಾರವಾದ ಜಮೀನಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹಿಂದುಳಿದ ವರ್ಗದ 205 ಸಮುದಾಯದ ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮಧ್ಯಪ್ರದೇಶದ
ಸಿಎಂ ಶಿವರಾಜಸಿಂಗ್ ಚವಾಣ್, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯದ ಎಲ್ಲ ಸಚಿವರು ಹಾಗೂ ಹಿಂದುಳಿದ ವರ್ಗದ ನಾಯಕರು ಪಾಲ್ಗೊಳ್ಳಲಿದ್ದಾರೆ. ವಿಜಯಪುರ ದಿಂದ ಐವತ್ತು ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಹೆಚ್ಚಿನ
ಸಂಖ್ಯೆಯಲ್ಲಿ ತಾಯಂದಿರುವ ಭಾಗಿಯಾಗುತ್ತಿರುವುದು ವಿಶೇಷ.
ಕೇಂದ್ರ ಸರ್ಕಾರ ಹಿಂದುಳಿದ ವರ್ಗದವರಿಗೆ ನೀಡಿದ
ಯೋಜನೆಗಳ ಕುರಿತು ಮನವರಿಕೆ ಮಾಡಿಕೊಡುವ ಕಾರ್ಯಕ್ರಮ ಇದಾಗಿದೆ ಎಂದರು.
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಾಬು ಮಾಶ್ಯಾಳ, ಮಾಧ್ಯಮ ಪ್ರಮುಖ ವಿಜಯ ಜೋಷಿ ಇದ್ದರು.