ಅನುಗ್ರಹ ಆಸ್ಪತ್ರೆಯಲ್ಲಿಆಕಸ್ಮಿಕ ಅಗ್ನಿ ಅವಘಡ, ಏನಿದು ಅನಾಹುತ?
ಸರಕಾರ್ ನ್ಯೂಸ್ ವಿಜಯಪುರ
ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಆಸ್ಪತ್ರೆಯ ಮೇಲ್ಮಹಡಿಯಲ್ಲಿ ಬೆಂಕಿ ಅವಘಡಸಂಭವಿಸಿದೆ.
ಇಲ್ಲಿನ ಕೇಂದ್ರ ಬಸ್ ನಿಲ್ದಾಣ ಬಳಿಯ ಅನುಗ್ರಹ ಕಣ್ಣಿನ ಆಸ್ಪತ್ರೆಯ ಕೊಠಡಿಯಲ್ಲಿ ಮಂಗಳವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಕೊಠಡಿಯಲ್ಲಿದ್ದ ಮಹತ್ವದ ದಾಖಲೆಗಳು ಬೆಂಕಿಗಾಹುತಿ ಆಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.