ನಮ್ಮ ವಿಜಯಪುರ

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ? ಎಲ್ಲಿ ಯಾವಾಗ?

 ಸರಕಾರ್‌ ನ್ಯೂಸ್‌ ವಿಜಯಪುರ

ಜಿಲ್ಲೆಯ ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳಿಂದ ಅ. 31ರಂದು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಾರ್ಯಾಲಯದಲ್ಲಿ ಅ. 31ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 2ರವರೆಗೆ ಲೋಕಾಯುಕ್ತ ಪೊಲೀಸ್‌ ಉಪಾಧೀಕ್ಷಕರು ಅಹವಾಲು ಸ್ವೀಕರಿಸುವರು.

ಇಂಡಿ ಪ್ರವಾಸಿ ಮಂದಿರದಲ್ಲಿ ಅ. 31ರ ಬೆಳಗ್ಗೆ 10.30ರಿಂದ ಮಧ್ಯಾಹ್ನ 2ರವರೆಗೆ ಪೊಲೀಸ್‌ ನಿರೀಕ್ಷಕರು-1 ಇವರು ಅಹವಾಲು ಸ್ವೀಕರಿಸುವರು. ಕೊಲ್ಹಾರದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ಅ. 31ರ ಬೆಳಗ್ಗೆ 10.30ರಿಂದ ಮಧ್ಯಾಹ್ನ 2ರವರೆಗೆ ಪೊಲೀಸ್‌ ನಿರೀಕ್ಷಕರು-2 ಇವರು ಅಹವಾಲು ಸ್ವೀಕರಿಸುವರು. ವಿಜಯಪುರ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಸಾರ್ವಜನಿಕರೀಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡಲು ಲಂಚ ಕೇಳುತ್ತಿದ್ದರೆ ಮತ್ತು ವಿನಾಕಾರಣ ವಿಳಂಬ ಮಾಡುತ್ತಿದ್ದರೆ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ದೂರುದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08352-255333/257786ಗೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

error: Content is protected !!