ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು? ಅಯ್ಯೋ ಶಿವನೆ ಏನಿದು ಅನಾಹುತ !
ಸರಕಾರ್ ನ್ಯೂಸ್ ಮುದ್ದೇಬಿಹಾಳ
ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಅಸುನೀಗಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ.
ಗುರುವಾರ ಬೆಳಗ್ಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾವ
ಗುರುವಾರ ಬೆಳಗಿನ ಜಾವ ತೋಟದ ಮನೆಯಲ್ಲಿ ಮಲಗಿದ್ದಾಗ ಈ ಅವಘಡ ಸಂಭವಿಸಿದೆ. ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತ ಮಹಿಳೆ.
ಘಟನೆ ವಿವರ: ಗ್ರಾಮದ ಹೊರವಲಯದ ಜಮೀನಿನಲ್ಲಿ ಕೆಲಸ ಮಾಡಿ ಬಂದ ನಿರ್ಮಲಾ ಮನೆಯಲ್ಲಿ ಮಲಗಿದ್ದರು. ಬೆಳಗಿನ ಜಾವ ಮಲಗಿದಲ್ಲೇ ಹಾವು ಕಚ್ಚಿದೆ. ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಕ್ಕೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿರ್ಮಲಾ ಅಸುನೀಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ
ಕಂದಾಯ ನಿರೀಕ್ಷಕರು ಭೇಟಿ ನೀಡಿದ್ದಾರೆ.