ನಮ್ಮ ವಿಜಯಪುರ

ಗೂಡ್ಸ್ ವಾಹನ- ಬೈಕ್ ಡಿಕ್ಕಿ ಓರ್ವ ಸ್ಥಳದಲ್ಲಿಯೇ ಸಾವು ! ಎಲ್ಲಿ ಹೇಗಾಯ್ತು?

ಸರಕಾರ್ ನ್ಯೂಸ್ ಇಂಡಿ

ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಅಸುನೀಗಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಬಳಿ ನಡೆದಿದೆ.
ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮೃತನ ವಿವರ ತಿಳಿದು ಬಂದಿಲ್ಲ.

ಇಂಡಿಯಿಂದ ವಿಜಯಪುರಕ್ಕೆ ಹೋಗುವ ರಸ್ತೆ ಮಧ್ಯೆ
ಈ ಅವಘಡ ಸಂಭವಿಸಿದೆ. ಗಂಭೀರ ಗಾಯಗೊಂಡ ಹಿಂಬದಿ ಸವಾರನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

error: Content is protected !!