ನಮ್ಮ ವಿಜಯಪುರ

ಭೀಕರ ಅಪಘಾತಕ್ಕೆ ತಂದೆ-ಮಗಳ ಧಾರುಣ ಸಾವು, ಅಯ್ಯಯ್ಯೋ ಏನಿದು ಅವಘಡ?

ಸರಕಾರ್‌ ನ್ಯೂಸ್‌ ದೇವರಹಿಪ್ಪರಗಿ

ಕ್ರೂಸರ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ತಂದೆ ಮತ್ತು ಮಗಳು ಅಸುನೀಗಿದ ಹೃದಯ ವಿದ್ರಾವಕ ಘಟನೆ ಗುರುವಾರ ನಡೆದಿದೆ.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಮೇಶ ನಾಟಿಕಕಾರ (45) ಹಾಗೂ ಇವರ ಮಗಳು ಖುಷಿ (8) ಸ್ಥಳದಲ್ಲೇ ಅಸುನೀಗಿದ್ದಾರೆ. ತಾಯಿ ಶ್ರೀದೇವಿ ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತಪಟ್ಟವರು ಬಸವನ ಬಾಗೇವಾಡಿ ತಾಲ್ಲೂಕಿನ ಬೂದಿಗಾಳ ಗ್ರಾಮದವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್‌ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!