ಧಗಧಗಿಸಿದ ಒಮಿನಿ ಕಾರ್, ಚಾಲಕ ಬಚಾವ್-ಬಟ್ಟೆ ಭಸ್ಮ
ಸರಕಾರ್ ನ್ಯೂಸ್ ವಿಜಯಪುರ
ಚಲಿಸುತ್ತಿದ್ದ ಓಮಿನಿ ಕಾರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಧಗಧಗಿಸಿದೆ !
ಮುದ್ದೇಬಿಹಾಳ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಓಮಿನಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅನಿಲ್ ಗೋಪಾಲ ಚವ್ಹಾಣ್ ಎಂಬುವರ ಕಾರ್ ಸುಟ್ಟು ಹೋಗಿದೆ.
ಓಮನಿ ಕಾರ್ ನಲ್ಲಿ ಬಟ್ಟೆ ಮಾರಾಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಟ್ಟೆಯಲ್ಲೆ ಭಸ್ಮವಾಗಿದ್ದು, ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಮುದ್ದೇಬಿಹಾಳ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)