ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಸರಕಾರ್ ನ್ಯೂಸ್ ವಿಜಯಪುರ
ನೇಣು ಹಾಕಿಕೊಂಡಿರೊ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ಅನುಮಾನಕ್ಕೆ ಎಡೆಮಾಡಿದೆ.
ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದ ಎಕ್ಸಫರ್ಟ್ ಪಿಯು ವಿಜ್ಞಾನ ಕಾಲೇಜಿನಲ್ಲಿ ಭಾನುವಾರ ನಸುಕಿನ ಜಾವ ಈ ಘಟನೆ ನಡೆದಿದ್ದು, ವಿಜಯಪುರದ ನಗರದ
ಅಜಯಕುಮಾರ ನುಚ್ಚಿ (17) ಮೃತ ವಿದ್ಯಾರ್ಥಿ.
ಟ್ರಸ್ಟ್ ನ ಅಧ್ಯಕ್ಷ ಬಿ.ಜಿ. ಹಿರೇಮಠ ಪುತ್ರನೊಂದಿಗೆ ಅಜಯಕುಮಾರ ಜಗಳಮಾಡಿಕೊಂಡಿದ್ದ, ಹೀಗಾಗಿ ಸಾವಿನ ಬಗ್ಗೆ ಪೋಷಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.
ನನ್ನ ಮಗನ ಸಾವಿನಲ್ಲಿ ಸಂಶಯವಿದೆ ಎಂದು ಕಾಲೇಜು ಆಡಳಿತ ಮಂಡಳಿ ವಿರುದ್ದ ದೂರು ನೀಡಲು ಪೋಷಕರ ನಿರ್ಧಾರ ಮಾಡಿದ್ದಾರೆ.
ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.