ರಾಜ್ಯ

ಮಲ್ಲಿಕಾರ್ಜುನ ಲೋಣಿ ಕಾಂಗ್ರೆಸ್‌ ಸೇರ್ಪಡೆ, ಮುನಿಸು ಮರೆತು ಕೈ ಹಿಡಿದ ನಾಯಕ !

ಸರಕಾರ್‌ ನ್ಯೂಸ್‌ ಬೆಂಗಳೂರು

ಕಳೆದ 2021ರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರವಾಗಿ ಕಣಕ್ಕಿಳಿದು ಪರಾಭವಗೊಂಡಿದ್ದ ಜಿಪಂ ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಸ್‌.ಲೋಣಿ ಇದೀಗ ಕಾಂಗ್ರೆಸ್‌ ಸೇರ್ಪಡೆ ಮೂಲಕ ಗಮನ ಸೆಳೆದಿದ್ದಾರೆ.

ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನ ಸಭೆ ಪ್ರತಿಪಕ್ಷ ನಾಯಕ ಎಸ್‌.ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಲೋಣಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಡಿ.ಕೆ. ಶಿವಕುಮಾರ ಹಾಗೂ ಎಸ್‌.ಸಿದ್ದರಾಮಯ್ಯ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಮಲ್ಲಿಕಾರ್ಜುನ ಲೋಣಿ ವಿವರ:

ಮಲ್ಲಿಕಾರ್ಜುನ ಲೋಣಿ 1995ರಲ್ಲಿ ಅಖಂಡ ವಿಜಯಪುರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದರು. 2021ರಲ್ಲಿ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಗಾಣಿಗ (ತೇಲಿ ಸಮಾಜ) ಸಂಘದ ಕಾರ್ಯಾಧ್ಯಕ್ಷರಾಗಿರುವ ಇವರು ಕಾಂಗ್ರೆಸ್‌ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗಿದ್ದಾರೆಂದು ಕಾಂಗ್ರೆಸ್‌ ವರಿಷ್ಟರು ತಿಳಿಸಿದ್ದಾರೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್‌ ನ್ಯೂಸ್‌ ಸಬ್‌ ಸ್ಕ್ರೈಬ್‌ ಮಾಡಿ. ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!