ಕೆಎಸ್ ಆರ್ ಟಿಸಿ ಬಸ್ ಪಲ್ಟಿ, ಪ್ರಯಾಣಿಕರಿಗೆ ಗಾಯ…! ಎಲ್ಲಿ? ಹೇಗಾಯ್ತು?
ಸರಕಾರ್ ನ್ಯೂಸ್ ವಿಜಯಪುರ
ವಿಜಯಪುರದಿಂದ ಇಂಡಿಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಪಲ್ಟಿ ಆಗಿದ್ದು, ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ.
ಬುಧವಾರ ಮಧ್ಯಾಹ್ನ 3 ರ ಸುಮಾರಿಗೆ ವಿಜಯಪುರದಿಂದ ಇಂಡಿಗೆ ಹೊರಟಿದ್ದ ಕೆಎ 28 ಎಫ್ 2161 ನಂಬರ್ ನ
ಬಸ್ ತಡವಲಗಾದ ಜೋಡು ಗುಡಿ ಬಳಿ ಅಪಘಾತಕ್ಕೀಡಾಗಿದೆ.
ವೇಗದಲ್ಲಿದ್ದ ಬಸ್ ನ ಬ್ರೇಕ್ ಫೇಲ್ ಆಗಿದೆ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ನೀಲಗಿರಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಬಸ್ ನ ಮುಂದಿನ ಗಾಜು ಪುಡಿ ಪುಡಿಯಾಗಿದ್ದು ಪ್ರಯಾಣಿಕರಿಗೆ ತರುಚಿದೆ.
ಬಸ್ ನಲ್ಲಿ ಸುಮಾರು 60 ಜನ ಪ್ರಯಾಣಿಕರಿದ್ದರು. ಗಾಯಗಳು ಗಳನ್ನು ಕೂಡಲೇ ತಡವಲಗಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಂಡಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.