ಖಾಸಗಿ ಬಸ್ ಗೆ ಲಾರಿ ಡಿಕ್ಕಿ, ಓರ್ವ ಸ್ಥಳದಲ್ಲಿಯೇ ಸಾವು
ಸರಕಾರ್ ನ್ಯೂಸ್ ವಿಜಯಪುರ
ರಸ್ತೆ ಪಕ್ಕದಲ್ಲಿ ನಿಂತಿದ್ದ ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದು ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿ ಸಾವಿಗೀಡಾಗಿದ್ದಾನೆ.
ವಿಜಯಪುರ ನಗರದ ಮನಗೂಳಿ ಬಳಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೃತಪಟ್ಟಿರುವ ಪ್ರಯಾಣಿಕನ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ.
ಅಲ್ಲದೇ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
(ಕ್ಷಣ ಕ್ಷಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)