ನಮ್ಮ ವಿಜಯಪುರ

ವಿಜಯಪುರಕ್ಕೆ ಆರ್‌ಡಿಪಿಆರ್‌ ಆಯುಕ್ತೆ ಶಿಲ್ಪಾನಾಗ ಭೇಟಿ, ಕಾಮಗಾರಿ ಪರಿಶೀಲನೆ

ಸರಕಾರ್‌ ನ್ಯೂಸ್‌ ವಿಜಯಪುರ

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾನಾಗ್ ಅವರು ಮಂಗಳವಾರ ವಿಜಯಪುರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಮತ್ತು ಮುಳವಾಡ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿ,75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಅನುಷ್ಠಾನಗೊಳ್ಳುತ್ತಿರುವ ಸರೋವರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.


ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಆದ್ಯತೆ ಮೇಲೆ ಕಾಮಗಾರಿಗಳನ್ನು ಕೈಗೊಳ್ಳಬೇಕು.ಭೂಮಿಯ ಅಂತರ್ಜಲಮಟ್ಟವನ್ನು ಹೆಚ್ಚಿಸಿ ನೀರಿನ ಮೂಲಗಳ ಅಭಿವೃಧ್ದಿಗೊಳಿಸುವಿಕೆ, ನರೇಗಾ ತಂತ್ರಾಂಶದಲ್ಲಿ ಕಾಯಕ ಬಂಧು ನೋಂದಣಿಗೆ ಕ್ರಮ ವಹಿಸಬೇಕು. ನರೇಗಾ ಯೋಜನೆಯಡಿ ಹಿರಿಯ ನಾಗರಿಕರು, ಮಹಿಳೆಯರು, ವಿಶೇಷ ಚೇತನರಿಗೆ ಆದ್ಯತೆ ನೀಡಿ ಕೆಲಸ ಒದಗಿಸಬೇಕು ಎಂದು ತಿಳಿಸಿದರು.

ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೋಟಗಾರಿಕೆ ಇಲಾಖೆ ಸಹಯೋಗದಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡಿರುವ ದ್ರಾಕ್ಷಿ ಬೆಳೆ ಹಾಗೂ ಪ್ರಗತಿ ಹಂತದಲ್ಲಿರುವ ಪೇರು ಸಸಿ ನಾಟಿ ಮಾಡಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು.

ನಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮರಣ ಹೊಂದಿದ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಅವಲಂಬಿತರಿಗೆ ಆಶ್ವಾಸನೆ ನಿಧಿಯ ಚೆಕ್ಕನ್ನು ಹಸ್ತಾಂತರಿಸಿದರು. ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಜಿಲ್ಲಾ ಸಂಪನ್ಮೂಲ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ, ರಾಜ್ಯ ಆಯುಕ್ತಾಲಯದ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ದಿಡ್ಡಿಮನಿ, ಜಿ.ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಕೊಲ್ಹಾರ ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಫರೀದಾ ಪಠಾಣ, ಜಿ.ಪಂ. ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ವಿ.ಎಸ್.ಹಿರೇಮಠ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!