ವಿದ್ಯಾರ್ಥಿ ವೇತನಕ್ಕಾಗಿ ನೇಕಾರರ ಮಕ್ಕಳಿಂದ ಅರ್ಜಿ ಕರೆ
ಸರಕಾರ್ ನ್ಯೂಸ್ ವಿಜಯಪುರ
ಜಿಲ್ಲೆಯ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಕೈಮಗ್ಗ ಗಣತಿ/ನೇಕಾರ ಸಮ್ಮಾನದಡಿ ಮತ್ತು ವಿದ್ಯುತ್ ಮಗ್ಗ ನೇಕಾರರ ಗಣತಿಯಲ್ಲಿ ಗುರುತಿಸಿರುವ ಎಲ್ಲಾ ನೇಕಾರರು ತಮ್ಮ ಮಕ್ಕಳ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ಇತರೆ ಸೌಲಭ್ಯಗಳ ಕುರಿತು ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸೇವಾಸಿಂಧು ತಂತ್ರಾಂಶದಲ್ಲಿ ದಿನಾಂಕ : 10-12-2022ರೊಳಗೆ ನೋಂದಾಯಿಸಿಕೊಂಡು, ತದನಂತರ ವಿದ್ಯಾರ್ಥಿ ವೇತನಕ್ಕಾಗಿ ನೇಕಾರರ ಮಕ್ಕಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್‍ಎಸ್‍ಪಿ) ದಲ್ಲಿ ಆನ್‍ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿ.ಪಂ., ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಷನ್ ಬ್ಯಾಕ್ ರೋಡ್, ವಿಜಯಪುರ ಕಚೇರಿ ಹಾಗೂ ಈ ಕಛೇರಿಯ ದೂರವಾಣಿ ಸಂಖ್ಯೆ: 08352-251268 ಅಥವಾ 9902561441 ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.