ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಲೋಕಾಯುಕ್ತ ಬಲೆಗೆ
ಸರಕಾರ್ ನ್ಯೂಸ್ ವಿಜಯಪುರ
ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚ ಪಡೆಯುತ್ತಿದ್ದ ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ವಿಜಯಪುರ ಎಪಿಎಂಸಿಯಲ್ಲಿ ಘಟನೆ ಗುರುವಾರ ಸಂಜೆ ಈ ಘಟನೆ ನಡೆದಿದೆ. ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಲೋಕಾಯುಕ್ತ ಬಲೆ ಬಿದ್ದಿದ್ದಾನೆ. ಲೈಸೆನ್ಸ್ ನೀಡಲು ಒಟ್ಟು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇರಿಸಿದ್ದನು. ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತರ ಕೈಗೆ ಸಾಕ್ಷ ಸಮೇತ ಸಿಕ್ಕಿ ಬಿದ್ದಿದ್ದಾನೆ. ಈತನ ಬಳಿಯಿದ್ದ ಹೆಚ್ಚುವರಿ 39 ಸಾವಿರ ರೂಪಾಯಿ ಜಫ್ತು ಮಾಡಲಾಗಿದೆ.
ಲೋಕಾಯುಕ್ತ ಎಸ್‌ಪಿ ಅನಿತಾ ಹದ್ದಣ್ಣವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪಿಎಸ್‌ಐ ಆನಂದ ಠಕ್ಕಣ್ಣವರ ಸೇರಿದಂತೆ ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)