ಅಪ್ರಾಪ್ತೆ ಮೇಲೆ ಅತ್ಯಾಚಾರ, ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ
ಸರಕಾರ್ ನ್ಯೂಸ್ ವಿಜಯಪುರ
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ವಿಜಯಪುರ ಜಿಲ್ಲಾ ವಿಶೇಷ ಪೊಕ್ಸೋ ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ.
ವಿಜಯಪುರದ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ (22) ಶಿಕ್ಷೆಗೊಳಗಾದ ಆಟೋ ಚಾಲಕ.
02-04-2021 ರಂದು ವಿಜಯಪುರ ನಗರದ ಗಾಂಧಿನಗರ ಬಳಿ ದನ ಮೇಯಿಸುವಾಗ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ವಿಶೇಷ ಪೊಕ್ಸೋ ನ್ಯಾಯಾಲಯದ ನ್ಯಾಯಾಧೀಶ ರಾಮ ನಾಯಕ ಅವರು, ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ, ಆರೋಪಿಗೆ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ವಿ.ಜಿ. ಹಗರಗುಂಡ ವಾದ ಮಂಡಿಸಿದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಮಾಡಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)