ನಮ್ಮ ವಿಜಯಪುರ

ಗೋದಾಮಿನಲ್ಲಿಸಿಲಿಂಡರ್ ಸ್ಪೋಟ, ಆಗಸಕ್ಕೆ ಚಿಮ್ಮಿದ ದಟ್ಟ ಹೊಗೆ, ಎಲ್ಲಿ? ಹೇಗಾಯಿತು?

ಸರಕಾರ್ ನ್ಯೂಸ್ ಸಿಂದಗಿ

ನೀರು ಶುದ್ಧೀಕರಣ ಘಟಕದಲ್ಲಿ ಏಕಾಏಕಿ ಸ್ಪೋಟ ಸಂಭವಿಸಿ ಆತಂಕ ಸೃಷ್ಟಿಸಿದ ಘಟನೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ‌.

ಇಲ್ಲಿನ ಪೊಲೀಸ್ ಠಾಣೆ ಹಿಂಭಾಗದ ಗೋದಾಮಿನಲ್ಲಿ ಭಾನುವಾರ ಮಧ್ಯಾಹ್ನ 12.15 ರ ಸುಮಾರಿಗೆ ಈ ಅವಘಢ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಧ್ಯಾಹ್ನ ಏಕಾಏಕಿ ಸ್ಪೋಟ ಸಂಭವಿಸಿದೆ. ದಟ್ಟ ಹೊಗೆ ಆಗಸದತ್ತ ಚಿಮ್ಮುತ್ತಿದ್ದಂತೆ ಗಾಬರಿಗೊಂಡ ಜನ ಓಡಿ ಹೋಗಿದ್ದಾರೆ. ಕೂಡಲೇ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಒಟ್ಟು ಎರಡು ಅಗ್ನಿ ಶಾಮಕ ವಾಹನಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗಿದೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!