ಕಲಬುರ್ಗಿ

ಭೀಕರ ರಸ್ತೆ ಅಪಘಾತದಲ್ಲಿ ಸಿಂದಗಿ ಸಿಪಿಐ ದಂಪತಿ ಸಾವು…!

ಸರಕಾರ್ ನ್ಯೂಸ್ ಜೇವರಗಿ

ಸಿಂದಗಿ ಸಿಪಿಐ ರವಿ ಉಕ್ಕುಂದ ಹಾಗೂ ಅವರ ಧರ್ಮ ಪತ್ನಿ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ.

ಜೇವರಗಿ ತಾಲೂಕಿನ ಎಸ್‌ಎನ್ ಹಿಪ್ಪರಗಿ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಸಿಂದಗಿಯಿಂದ ಕಲಬುರಗಿಯ ಆಸ್ಪತ್ರೆಗೆಂದು ಪತ್ನಿ ಜೊತೆ ಕಾರ್‌ನಲ್ಲಿ ತೆರಳುತ್ತಿದ್ದಾಗ ಎಸ್‌ಎನ್ ಹಿಪ್ಪರಗಿ ಬಳಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ರವಿ ಅವರೇ ಕಾರು ಚಲಾಯಿಸುತ್ತಿದ್ದರು. ಸ್ಥಳದಲ್ಲಿಯೇ ದುರಂತ ಸಾವು ಕಂಡಿದ್ದು ನೆಲೊಗಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಮಾಡಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!