ಕುರಿ ಮೇಕೆ-ಹಸು-ಎಮ್ಮೆ ಘಟಕಗಳ ಅನುಷ್ಠಾನಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಸರಕಾರ್ ನ್ಯೂಸ್ ವಿಜಯಪುರ
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ಕುರಿ, ಮೇಕೆ, ಹಸು ಹಾಗೂ ಎಮ್ಮೆ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಅವರಿಂದ ಅರ್ಜಿ ನಮೂನೆ ಪಡೆದು ಎಲ್ಲ ಅಗತ್ಯ ದಾಖಲೆಗಳೊಂದಿಗೆ 30-12-2022 ರೊಳಗಾಗಿ ಸಂಬಂಧಿಸಿದ ತಾಲೂಕಾ ಕಚೇರಿಗೆ ಸಲ್ಲಿಸಬೇಕು. ಅರ್ಹತೆ, ಲಗತ್ತಿಸಬೇಕಾದ ದಾಖಲೆಗಳು ಸೇರಿದಂತೆ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಾ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ. ಎಸ್. ಘೋಣಸಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಮಾಡಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)