ಬೈಕ್ ಗೆ ಬಸ್ ಡಿಕ್ಕಿ, ಚಾಲಕನ ಮೇಲೆ ಸವಾರರಿಂದ ಹಲ್ಲೆ…!
ಸರಕಾರ್ ನ್ಯೂಸ್ ವಿಜಯಪುರ
ಬೈಕ್‌ಗೆ ಬಸ್ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸ್ಕಿಡ್ ಆಗಿದ್ದು, ಇದರಿಂದ ಆಕ್ರೋಶಗೊಂಡ ಬೈಕ್ ಸವಾರರು ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಅಥರ್ಗಾ ಬಳಿ ನಡೆದಿದೆ.
ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಬಳಿ ಗುರುವಾರ ಬೆಳಗ್ಗೆ ಈ ಘಟನೆ ನಡೆದಿದೆ.
ಇಂಡಿ – ವಿಜಯಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಅಥರ್ಗಾ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಆಕ್ರೋಶಗೊಂಡ ಬೈಕ್ ಸವಾರರು ಬಸ್ ಚಾಲಕ ಚಾಂದಪಟೇಲ್ ಬಿರಾದಾರನ ಮೇಲೆ ಹಲ್ಲೆಗೈದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಡ್ರೈವರ್ ಬಿರಾದಾರ ಸ್ಥಳೀಯ ಆಸ್ಪತ್ರೆಗೆ ದಾಖಲು ಆಗಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಮಾಡಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)