ನಮ್ಮ ವಿಜಯಪುರ

ಪಿಕೆಪಿಎಸ್‌ನಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯಿತು ದೃಶ್ಯಾವಳಿ

ಸರಕಾರ್‌ ನ್ಯೂಸ್‌ ಮುದ್ದೇಬಿಹಾಳ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯ ಕಿಟಕಿ ಮುರಿದು ಕಳ್ಳತನ ಮಾಡಿರುವ ಪ್ರಕರಣ ಮುದ್ದೇಬಿಹಾಳದ ಕುಂಟೋಜಿ ಗ್ರಾಮದಲ್ಲಿ ನಡೆದಿದೆ.

ಸಂಘದ ಕಚೇರಿಯ ಕಿಟಕಿಗೆ ಅಳವಡಿಸಿದ್ದ ಕಬ್ಬಿಣದ ಸರಳು ಮುರಿದು ಒಳನುಗ್ಗಿದ ಕಳ್ಳರು ಒಳಗಿದ್ದ 60,749 ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ಕಳ್ಳತನದ ದೃಶ್ಯಗಳು ಸಂಘದ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡಿರುವ ಕಿರಾತಕ ಕಳ್ಳತನ ನಡೆಸುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಮುದ್ದೇಬಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್‌ ನ್ಯೂಸ್‌ ಸಬ್‌ಸ್ಕ್ರೈಬ್‌ ಆಗಿ. ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!