ಆಸ್ಪತ್ರೆಗಳಿಗೆ ಲೋಕಾಯುಕ್ತ ಎಸ್‌ಪಿ ಭೇಟಿ, ಸರಕಾರಿ ಸೌಲಭ್ಯಗಳ ಪರಿಶೀಲನೆ
ಸರಕಾರ್ ನ್ಯೂಸ್ ಮುದ್ದೇಬಿಹಾಳ
ವಿಜಯಪುರ ಲೋಕಾಯುಕ್ತ ಪೋಲಿಸ್ ಅಧೀಕ್ಷಕಿ ಅನಿತಾ ಹದ್ದನ್ನವರ ಅವರು ಸೋಮವಾರ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಾ ಆಸ್ಪತ್ರೆಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆ, ಸೌಲಭ್ಯ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳ ಕಾರ್ಯನಿರ್ವಹಣೆ, ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ, ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಆನಂದ ಟಕ್ಕಣ್ಣವರ, ಪೋಲಿಸ್ ನಿರೀಕ್ಷಕ ಆನಂದ ದೋಣಿ ಉಪಸ್ಥಿತರಿದ್ದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)