ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ಡಿ.16ರಂದು ಬೃಹತ್ ಉದ್ಯೋಗ ಮೇಳ
ಸರಕಾರ್ ನ್ಯೂಸ್ ವಿಜಯಪುರ
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದರಬಾರ ಸಮೂಹ ಶಿಕ್ಷಣ ಸಂಸ್ಥೆ ಇವರ ಸಹಯೋಗದಲ್ಲಿ ಡಿ.16 ರಂದು ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10-30 ಗಂಟೆಗೆ ಉದ್ಯೋಗ ಮೇಳವನ್ನು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದಡಾ.ಸಿ.ಎನ್.ಅಶ್ವಥ್‍ನಾರಾಯಣ್ ಅವರು ಉದ್ಘಾಟಿಸಲಿದ್ದಾರೆ.
ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರೂ ಆದ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ), ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಡಾ.ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸೋಮನಗೌಡ ಬಿ.ಪಾಟೀಲ (ಸಾಸನೂರ), ಡಾ.ದೇವಾನಂದ ಚವ್ಹಾಣ, ಸುನೀಲಗೌಡ ಬಿ.ಪಾಟೀಲ, ರಮೇಶ ಭೂಸನೂರ, ಪಿ.ಎಚ್.ಪೂಜಾರ, ಪ್ರಕಾಶ ಹುಕ್ಕೇರಿ, ಕನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷರಾದ ವಿಜುಗೌಡ ಎಸ್.ಪಾಟೀಲ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್‌ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)