ನಮ್ಮ ವಿಜಯಪುರ

ಆಕಸ್ಮಿಕ ಅಗ್ನಿ ಅವಘಡ, ಹೊತ್ತಿ ಉರಿದ ಕಾರು….!

ಸರಕಾರ್ ನ್ಯೂಸ್ ವಿಜಯಪುರ

ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಬೆಲೆಬಾಳುವ ಕಾರು ಹೊತ್ತಿ ಉರಿದಿದ್ದು, ಕಾರ್‌ನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ.

ವಿಜಯಪುರದ ಇಟ್ಟಂಗಿಹಾಳ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ಈ ಅವಘಡ ಸಂಭೌಇಸಿದೆ. ಕಾರಿನಲ್ಲಿ ಐವರು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದರು.

ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಒಳಗಿದ್ದವರು ಕಾರ್ ನಿಲ್ಲಿಸಿ ಹೊರಬಂದಿದ್ದಾರೆ. ತಕ್ಷಣವೇ ಬೆಂಕಿ ತನ್ನ ಕೆನ್ನಾಲಿಗೆ ಚಾಚಿದುದ್ದು, ಇಡೀ ಕಾರ್ ಧಗಧಗಿಸಿದೆ. ಮಹಾರಾಷ್ಟ್ರದ ಸಾಂಗ್ಲಿ ರಿಜಿಸ್ಟ್ರೇಷನ್ ಹೊಂದಿರುವ ಆಲ್ಟೋ ಕಾರು ಇದಾಗಿದ್ದು, ಸ್ಥಳದಲ್ಲಿದ್ದವರು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!