ಕಬ್ಬಿನ ಟ್ಯಾಕ್ಟರ್‌ಗೆ ಲಾರಿ ಡಿಕ್ಕಿ, ಓರ್ವ ಸ್ಥಳದಲ್ಲಿಯೇ ಸಾವು, ಮತ್ತೋರ್ವನಿಗೆ ಗಾಯ…!
ಸರಕಾರ್ ನ್ಯೂಸ್ ಚಡಚಣ
ಕಬ್ಬು ತುಂಬಿಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವಿಗೀಡಾದ ಘಟನೆ ಚಡಚಣ ತಾಲೂಕಿನ ಭೀಮಾಶಂಕರ ಸಕ್ಕರೆ ಕಾರ್ಖಾನೆ ಕ್ರಾಸ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಅಗರಖೇಡ ಗ್ರಾಮದ ಶಂಕರಲಿಂಗ ವಾಘಮೋರೆ (28) ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಕಬ್ಬು ತುಂಬಿಕೊಂಡು ನಿಂತಿದ್ದ ಸಂದರ್ಭ ವೇಗವಾಗಿ ಬಂದ ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ. ಇನ್ನೊಬ್ಬ ವ್ಯಕ್ತಿಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸ್ಥಳಕ್ಕೆ ಝಳಕಿ ಪೊಲೀಸರು ದೌಢಾಯಿಸಿ ಪರಿಶೀಲಿಸಿದರೆಂದು ಸ್ಥಳೀಯರು ತಿಳಿಸಿದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್‌ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್‌ಮಾಡಿ)