ಬೇಡ ಜಂಗಮಕ್ಕೆ ಸಿಗದ ಎಸ್‌ಸಿ ಪ್ರಮಾಣ ಪತ್ರ, ಸದನದಲ್ಲಿ ಪ್ರಶ್ನಿಸಿದ ಶಾಸಕ ಡಾ.ದೇವಾನಂದ ಚವಾಣ್
ಸರಕಾರ್ ನ್ಯೂಸ್ ಬೆಳಗಾವಿ
ಬೇಡ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಲು ಆಗ್ರಹಿಸಿ ಸಾಕಷ್ಟು ಹೋರಾಟ, ಧರಣಿ ಹಾಗೂ ಸತ್ಯಾಗ್ರಹಳು ನಡೆಯುತ್ತಿದ್ದರೂ ಈವರೆಗೂ ಬೇಡಿಕೆ ಈಡೇರದೇ ಇರುವ ಬಗ್ಗೆ ನಾಗಠಾಣ ಶಾಸಕ ಡಾ.ದೇವಾನಂದ ಚವಾಣ್ ಸರ್ಕಾರದ ಗಮನ ಸೆಳೆದಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿರುವ ಅವರು, ಬೇಡ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸು ಪ್ರಸ್ತಾವನೆ ಸರ್ಕಾರದ ಮುಂದೆ ಇದೆಯೇ? ಬೇಡ ಜಂಗಮ ಸಾಮಜವನ್ನು ಎಸ್‌ಸಿಗೆ ಸೇರ್ಪಡೆಗೊಳಿಸಲು ಇರುವ ಅಡೆತಡೆಗಳೇನು? ವಿವರಣೆ ನೀಡಿ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಭಾರತ ಸರಕಾರ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಬೇಡ ಜಂಗಮ ಜಾತಿಯನ್ನು ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಿದೆ. ಆದರೆ, ಜಾತಿ ಪ್ರಮಾಣ ಪತ್ರಗಳನ್ನು ನೀಡುವ ಪ್ರಾಧಿಕಾರಗಳು ಪ್ರಮಾಣ ಪತ್ರಗಳನ್ನು ನೀಡುತ್ತಿಲ್ಲವೆಂದು ಧರಣಿ ಸತ್ಯಾಗ್ರಹ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ದಿನಾಂಕ : 21-03-2018 ಹಾಗೂ 02-07-2022 ರಂದು ರಾಜ್ಯ ಸರ್ಕಾರದಿಂದ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಮುಂದುವರಿದು ಬೇಡ ಜಂಗಮ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುವಲ್ಲಿ ಇರುವ ಗೊಂದಲಗಳ ಬಗ್ಗೆ ಪರಿಶೀಲಿಸಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಾನೂನು ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನೂ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)
Thank U Sir