ಕರ್ನಾಟಕದಲ್ಲಿ ಹೆಚ್ಚಿದ ಸೈಬರ್ ಕ್ರೈಮ್, 80 ಸಾವಿರಕ್ಕೂ ಅಧಿಕ ಪ್ರಕರಣ ದಾಖಲು, ಸರ್ಕಾರ ಕೈಗೊಂಡ ಕ್ರಮ ಏನು?
ಸರಕಾರ್ ನ್ಯೂಸ್ ಬೆಂಗಳೂರು
ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಹಾಗೂ ಇತರೇ ಮಾಧ್ಯಮಗಳಿಂದ ಅಶ್ಲೀಲ, ನಗ್ನಹಾಗೂ ಅರೆನಗ್ನ ಚಿತ್ರಗಳು ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಯುವಕ-ಯುವತಿಯರು ಹಾಗೂ ಕೌಟುಂಬಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.
ರಾಜ್ಯ ಸರ್ಕಾರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಳ್ಳುತ್ತಿರುವ ಅಶ್ಲೀಲ, ನಗ್ನ ಹಾಗೂ ಅರೆ ನಗ್ನ ಚಿತ್ರಗಳಿಗೆ ಬ್ರೇಕ್ ಹಾಕಲು ಸಾಕಷ್ಟು ಕ್ರಮ ಕೈಗೊಂಡರೂ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಜೊತೆಗೆ ಸೈಬರ್ ಕ್ರೈಮ್ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು, ಅನೇಕರು ವಂಚನೆಗೊಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳಲು ಮುಂದಾಗಿದೆ.
ಅಶ್ಲೀಲ ಚಿತ್ರಗಳು:
ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಅಶ್ಲೀಲ, ಆಕ್ಷೇಪಾರ್ಹ ದೃಶ್ಯಗಳು ಮತ್ತು ಸಮಾಜಘಾತುಕ ವಿಷಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕುರಿತಂತೆ ಐಟಿ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಇತರೆ ಕಾಯ್ದೆಗಳಡಿ ಅನೇಕ ಪ್ರಕರಣ ದಾಖಲಿಸಲಾಗಿದೆ.
2018ರಲ್ಲಿ 21, 2019ರಲ್ಲಿ -51, 2020ರಲ್ಲಿ 130, 2021ರಲ್ಲಿ 175 ಹಾಗೂ 2022ರಲ್ಲಿ 185 ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕುಂದುಕೊರತೆ ವಿಭಾಗ ಸ್ಥಾಪಿಸಲಾಗಿದೆ.
80 ಸಾವಿರಕ್ಕೂ ಅಧಿಕ ಸೈಬರ್ ಪ್ರಕರಣ:
ಇನ್ನು ಸೈಬರ್ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಆನ್ ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್ ಹಾಕಲು ಸಹ ಕ್ರಮ ಕೈಗೊಳ್ಳಲಾಗಿದೆ. ಅದಕ್ಕಾಗಿ ನ್ಯಾಶನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಸ್ಥಾಪಿಸಲಾಗಿದೆ. ಈ ಪೋರ್ಟಲ್‌ನಲ್ಲಿ 2022 ಡಿ. 14ರವರೆಗೆ ಒಟ್ಟು 80379 ಪ್ರಕರಣಗಳು ದಾಖಲಾಗಿವೆ. ರಾಜಧಾನಿಯಲ್ಲಿಯೇ ಇಂಥ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿವೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)