ಸರ್ಕಾರದ ಸಾಲಸೌಲಭ್ಯ ಸಮರ್ಪಕವಾಗಿ ಸಿಗಲಿ, ಬ್ಯಾಂಕ್ ಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಇಒ ರಾಹುಲ್ ಶಿಂಧೆ ಸೂಚನೆ
ಸರಕಾರ್ ನ್ಯೂಸ್ ವಿಜಯಪುರ
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರ ಅಧ್ಯಕ್ಷತೆಯಲ್ಲಿ¸ ಜಿಲ್ಲಾ ಮಟ್ಟದ ಬ್ಯಾಂಕುಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ ವತಿಯಿಂದ ಮಂಗಳವಾರ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಸ್ವ-ಸಹಾಯ ಸಂಘಗಳು, ಪಿ.ಎಮ್ ಸ್ವನಿಧಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬ್ಯಾಂಕಗಳಲ್ಲಿ ಬಾಕಿ ಉಳಿದಿರುವ ಸಾಲ ಸೌಲಭ್ಯ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಬ್ಯಾಂಕಿನ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಾಮಿ ವಿವೇಕಾನಂದ ಯುವ ಸಂಘಗಳ ರಚನೆಯಲ್ಲಿ ರಾಜ್ಯ ಮಟ್ಟದಲ್ಲಿ ಮೂದಲನೇ ಸ್ಥಾನದಲ್ಲಿ ಇರುವುದಾಗಿ ತಿಳಿಸಿದರು. ಎಲ್ಲಾ ಬ್ಯಾಂಕಗಳು ಯುವಕರಿಗೆ ಸಾಲ ಸೌಲಭ್ಯವನ್ನು ಆಧ್ಯತೆಯ ಮೇಲೆ ನೀಡಿ, ಯುವಕರಿಗೆ ಪ್ರೋತ್ಸಾಹಿಸಲು ಸೂಚಿಸಿದರು.
ನಬಾರ್ಡ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ವಿಕಾಸ ರಾಠೋಡ ಅವರು ಯೋಜನೆ ಕುರಿತು ಮಾತನಾಡಿ, 2023-24ನೇ ಹಣಕಾಸು ವರ್ಷಕ್ಕೆ ಬೆಳೆ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳ ಸಾಲ, ಕೃಷಿ ಮೂಲಭೂತ ಸೌಲಭ್ಯ, ಕೃಷಿ ಆಧಾರಿತ ಪೂರಕ ಚಟುವಟಿಕೆ ಹಾಗೂ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಸೇರಿದಂತೆ, ಒಟ್ಟಾಗಿ ರೂ.11105.8 ಕೋಟಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ರಾಷ್ಷ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ (ನಬಾರ್ಡ) ವತಿಯಿಂದ 2023-24ನೇ ಸಾಲಿನ ಸಂಭಾವ್ಯ ಸಾಲ ಯೋಜನೆಯ ಕಿರು ಪುಸ್ತಿಕೆಯನ್ನು ರಾಹುಲ್ ಶಿಂಧೆ ಅವರು ಈ ಸಂದರ್ಭ ಬಿಡುಗಡೆಗೊಳಿಸಿದರು.
ಜಿಲ್ಲಾ ಅಗ್ರಣಿ ಬ್ಯಾಂಕಿನ ವ್ಯವಸ್ಥಾಪಕರಾದ ನರೆಂದ್ರಬಾಬು ಎನ್.ವಿ. ವಿಶೇಷ ಅಹ್ವಾನಿತರಾಗಿ ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರು ಲಾಲಾಸಾಬ ಕೊರಬು, ಜಿಲ್ಲಾ ಕೈಗಾರಿಕಾ ಮಾಲಿಕರ ಸಂಘದ ಅಧ್ಯಕ್ಷರಾದ ಎಸ್.ವಿ. ಪಾಟೀಲ್ ಹಾಗೂ ಜಿಲ್ಲಾ ಹೊಟೆಲ್ ಮಾಲಿಕರ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಪ್ರಮುಖ ಬ್ಯಾಂಕುಗಳ ಮುಖ್ಯ ವ್ಯವಸ್ಥಾಪಕರು ಹಾಗೂ ಎಲ್ಲಾ ಬ್ಯಾಂಕುಗಳ ಜಿಲ್ಲಾ ಸಂಯೋಜಕರು, ಜಿಲ್ಲೆಯ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)