ಬೆಳಗಾವಿ

ಹಾಲುಮತ ಸಮಾಜಕ್ಕೆ ಸಿಗುವುದೇ ಎಸ್‌ಟಿ ಮೀಸಲಾತಿ? ಸದನದಲ್ಲಿ ಶಾಸಕ ದೇವಾನಂದ ಚವಾಣ್‌ಗೆ ಸರ್ಕಾರ ನೀಡಿದ ಉತ್ತರವೇನು? ಇಲ್ಲಿದೆ ನೋಡಿ ಡಿಟೇಲ್ಸ್‌

ಸರಕಾರ್‌ ನ್ಯೂಸ್‌ ಬೆಳಗಾವಿ

ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮೀಸಲಾತಿ ಜಟಾಪಟಿ ಜೋರಾಗುತ್ತಿದ್ದು ಎಲ್ಲ ಸಮುದಾಯಗಳು ತಮ್ಮ ತಮ್ಮ ಬೇಡಿಕೆಯನ್ನು ಸರ್ಕಾರದ ಮುಂದಿಡುತ್ತಿವೆ. ಅಂತೆಯೇ ಹಾಲುಮತ ಸಮುದಾಯ ಕೂಡ ತಮಗೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕೆಂದು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು, ಈ  ಬಗ್ಗೆ ನಾಗಠಾಣ ಶಾಸಕ ಡಾ.ದೇವಾನಂದ ಚವಾಣ್‌ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿರುವ ಹಿಂದುಳಿದ ಹಾಲುಮತ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆಯಾ? ಹಾಲುಮತ ಸಮಾಜದ ಕುಲ ಶಾಸ್ತ್ರೀಯ ಅಧ್ಯಯನ ಮಾಡಿಸಲಾಗಿದೆಯೇ? ಇಲ್ಲದಿದ್ದಲ್ಲಿ ಯಾವಾಗ ಮಾಡಲಾಗುವುದು ವಿವರಿಸಿ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು,

ಸರ್ಕಾರದ ಆದೇಶ ಸಂಖ್ಯೆ: ಸಕಇ 186 ಎಸ್‌ಎಡಿ 2017 ದಿನಾಂಕ: 04.05. 2019ರನ್ವಯ ಕರ್ನಾಟಕ ರಾಜ್ಯದ ಕುರುಬ ಸಮಾಜದ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ನೀಡಲಾಗಿದೆ. ಅಧ್ಯಯನ ಪೂರ್ಣಗೊಂಡು ವರದಿ ಸ್ವೀಕೃತವಾದ ನಂತರ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ಹೀಗಾಗಿ ಹಾಲುಮತ ಸಮಾಜಕ್ಕೆ ಎಸ್‌ಟಿ ನೀಡಬೇಕೆಂಬ ವಿಚಾರ ಮುನ್ನೆಲೆಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್‌ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!