ಪೂಜ್ಯ ಸಿದ್ಧೇಶ್ವರ ಶ್ರೀ ದರ್ಶನ ಪಡೆದ ಸಚಿವ ಶ್ರೀರಾಮುಲು, ಜ್ಞಾನ ಯೋಗಾಶ್ರಮದಲ್ಲಿಸುದ್ದಿಗಾರರಿಗೆ ಹೇಳಿದ್ದೇನು?
ಸರಕಾರ್ ನ್ಯೂಸ್ ವಿಜಯಪುರ
ನಡೆದಾಡುವ ದೇವರು ಪರಮ ಪೂಜ್ಯ ಸಿದ್ಧೇಶ್ವರ ಶ್ರೀಗಳನ್ನು ಭೇಟಿ ಮಾಡಿದ ಸಚಿವ ಶ್ರೀರಾಮುಲು ಪೂಜ್ಯರ ದರ್ಶನಾಶೀರ್ವಾದ ಪಡೆದು ಯೋಗಕ್ಷೇಮ ವಿಚಾರಿಸಿದರು.
ಗುರುವಾರ ರಾತ್ರಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆದರು. ಆಶ್ರಮದ ಮೊದಲ ಮಹಡಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಪೂಜ್ಯರ ಆರೋಗ್ಯ ವಿಚಾರಿಸಲು ಆಗಮಿಸಿ, ಶ್ರೀಗಳ ದರ್ಶನ ಪಡೆದಿದ್ದೇನೆ.
ಶ್ರೀಗಳಿಗೆ ಚಿಕಿತ್ಸೆ ನೀಡುವ ವೈದ್ಯರೊಂದಿಗೂ ಮಾತನಾಡಿದ್ದೇನೆ. ವೈದ್ಯರ ಪ್ರಕಾರ ಯಾರೂ ಆತಂಕ ಪಡೋ ಅವಶ್ಯಕತೆಯಿಲ್ಲ. ಸ್ವಾಮೀಜಿಗಳ ಆರೋಗ್ಯದ ಕುರಿತು ಸಿಎಂ ಜತೆ ಕಿರಿಯ ಶ್ರೀಗಳ ಜೊತೆಗೆ ಮಾತನಾಡಿಸಿದ್ದೇನೆ. ನಾಳೆ ರಾಜ್ಯಕ್ಕೆ ಅಮಿತ್ ಷಾ ಅವರ ಭೇಟಿ ಬಳಿಕ ಸ್ವಾಮೀಜಿ ಅವರ ದರ್ಶನಕ್ಕೆ ಬರೋದಾಗಿ ಸಿಎಂ ಹೇಳಿದ್ದಾರೆ.
ನಾನು ಕಳೆದ 20 ವರ್ಷಗಳಿಂದ ಆಶ್ರಮದ ಭಕ್ತನಾಗಿ ಶ್ರೀಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಸ್ವಾಮೀಜಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಚೇತರಿಕೆಯಾಗುತ್ತಿದೆ.
ಸ್ವಾಮೀಜಿ ಆಶ್ರಮದಲ್ಲೇ ಇರೋದಾಗಿ ತಿಳಿಸಿದ್ದಾರೆ. ಹೀಗಾಗಿ ಇಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ವಾಮೀಜಿ ಸ್ಪಂದನೆ ಮಾಡುತ್ತಿದ್ದಾರೆ ಎಂದು ಶ್ರೀರಾಮುಲು ತಿಳಿಸಿದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)