ಗಡಿಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತ, ಇಲಾಖೆ ಮಾಡಿದ್ದೇನು? ಹೇಳಿದ್ದೇನು? ಸದ್ಯ ನಡೆದಿದ್ದೇನು? ಇಲ್ಲಿದೆ ಡಿಟೇಲ್ಸ್
ಸರಕಾರ್ ನ್ಯೂಸ್ ಬೆಂಗಳೂರ
ಅಕ್ರಮ ಮಧ್ಯ ಮಾರಾಟ ಹಾವಳಿ ಹೆಚ್ಚಾಗುತ್ತಿದ್ದರೂ ಅಬಕಾರಿ ಇಲಾಖೆ ಮಾತ್ರ ಆಗೊಂದು ಈಗೊಂದು ಪ್ರಕರಣ ದಾಖಲಿಸಿಕೊಂಡು ಕೈತೊಳೆದುಕೊಳ್ಳುತ್ತಿದೆ.
ಅಕ್ರಮ ಮಧ್ಯ ಮಾರಾಟದಲ್ಲಿ ಅಬಕಾರ ಇಲಾಖೆ ಅಧಿಕಾರಿಗಳ ಕೈವಾಡ ಇದೆ ಎಂಬ ಆರೋಪ ಕೇಳಿ ಬರುತ್ತಿದ್ದಂತೆ ಗಂಭೀರತೆ ಪಡೆದುಕೊಳ್ಳುವ ಇಲಾಖೆ ಅಧಿಕಾರಿಗಳು ಸಣ್ಣ ಪುಟ್ಟ ಪ್ರಕರಣ ದಾಖಲಿಸಿ ಸರ್ಕಾರಕ್ಕೆ ವರದಿ ಒಪ್ಪಿಸುವ ಸಂಪ್ರದಾಯ ಬೆಳೆದು ಬಂದಿದೆ.
ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 1,79,154 ಕಡೆ ದಾಳಿ ನಡೆಸಿದ್ದು, 7664 ಜಾಮೀನಿಲ್ಲದ ಹಾಗೂ 58337 ಜಾಮೀನೀಯ ಪ್ರಕರಣ ದಾಖಲಿಸಲಾಗಿದೆ. ಒಟ್ಟು 66001 ಪ್ರಕರಣಗಳು ದಾಖಲಾಗಿದ್ದು, ಇದರ ಹೊರತಾಗಿಯೂ ಅನೇಕ ಅಕ್ರಮ ಪ್ರಕರಣಗಳು ನಡೆದಿರುವ ಆರೋಪ ಇದೆ.
ಗಡಿಭಾಗದಲ್ಲಿ ಹೆಚ್ಚಿದ ಅಕ್ರಮ:
ಅದರಲ್ಲೂ ವಿಜಯಪುರ, ಬಾಗಲಕೋಟೆ, ಬೆಳಗಾವಿ (ಉತ್ತರ) ಹಾಗೂ ಬೆಳಗಾವಿ (ದಕ್ಷಿಣ) ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿರುವುದು ಇಲಾಖೆಯ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಜಿಲ್ಲೆಗಲ್ಲಿ ನವೆಂಬರ್ 2022ರ ಅಂತ್ಯಕ್ಕೆ ಒಟ್ಟು 1198 ಮದ್ಯ ಮಾರಾಟ ಸನ್ನದುದಾರರಿದ್ದಾರೆ. ಇದರ ಹೊರತಾಗಿ ನೆರೆಯ ಗೋವಾ ಹಾಗೂ ಮಹಾರಾಷ್ಟ್ರದಿಂದ ಅಕ್ರಮವಾಗಿ ಮದ್ಯ ಸರಬರಾಜಾಗುತ್ತಿದೆ.
ವಿಜಯಪುರ ಜಿಲ್ಲೆಯ ಗಡಿಭಾಗದ ಇಂಡಿ ಮತ್ತು ವಿಜಯಪುರ ವಲಯ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ 49 ಪ್ರಕರಣಗಳನ್ನು ದಾಖಲಿಸಿ 58 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಇವರಿಂದ 851 ಲೀಟರ್ ಹೊರ ರಾಜ್ಯ ಮದ್ಯ, 389 ಲೀಟರ್ ಮದ್ಯ ಮತ್ತು 55 ಲೀಟರ್ ಬಿಯರ್ ಹಾಗೂ 15 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಲಾಖೆ ಏನು ಮಾಡುತ್ತಿದೆ?
ಅಕ್ರಮ ಮದ್ಯ ಮಾರಾಟ ತಡೆಗೆ ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್‌ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಈ ಸಮಯದಲ್ಲಿ ಮತ್ತು ದೂರು ಸ್ವೀಕೃತವಾದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ ಅಕ್ರಮ ಕಂಡು ಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಾನುಸಾರ ಪ್ರಕರಣ ದಾಖಲಿಸಲಾಗುತ್ತಿದೆ.
ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆ ಏರ್ಪಡಿಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಹತ್ತಿಕ್ಕಲು ಕ್ರಮ ವಹಿಸುವ ಕುರಿತು ಪೊಲೀಸ್ ವರಿಷ್ಟಾಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಬಕಾರಿ ಕಾಯ್ದೆ 1956ರ ಕಲಂ 50ರಂತೆ ಕಾರ್ಯವ್ಯಾಪ್ತಿಯಲ್ಲಿ ನಡೆಯುವ ಅಬಕಾರಿ ಅಕ್ರಮಗಳ ಕುರಿತು ಮಾಹಿತಿ ನೀಡಲು ತಿಳಿವಳಿಕೆ ಪತ್ರ ಜಾರಿಗೊಳಿಸಲಾಗುತ್ತಿದೆ.
ಆದರೆ, ಇದರ ಹೊರತಾಗಿ ಸಾಕಷ್ಟು ಕಡೆ ಅಕ್ರಮ ಅವ್ಯಾವಹತವಾಗಿ ನಡೆದಿದ್ದರು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕೆಂಬುದು ಸಾರ್ವಜನಿಕರ ಅಭಿಪ್ರಾಯ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)