ಬೆಂಗಳೂರು

ನಕಲಿ ಜಾತಿ ಪ್ರಮಾಣ ಪತ್ರದ ಹಾವಳಿ, ರಾಜ್ಯಾದ್ಯಂತ ದಾಖಲಾದ ಪ್ರಕರಣಗಳು ಎಷ್ಟು ಗೊತ್ತಾ?

ಸರಕಾರ್‌ ನ್ಯೂಸ್‌ ಬೆಂಗಳೂರು

ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದ, ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಪರಿಶಿಷ್ಟರ ಸೌಲಭ್ಯಗಳನ್ನು ಕಬಳಿಸುವ ಹುನ್ನಾರ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ಇಂಥ 194 ಪ್ರಕರಣಗಳು ದಾಖಲಾಗಿವೆ.

ಮೂಲ ಜಾತಿಯನ್ನು ಹೊರತುಪಡಿಸಿ ಎಸ್‌ಸಿ ಮತ್ತು ಎಸ್‌ಟಿ ಪ್ರಮಾಣ ಪತ್ರ ಪಡೆದು ಸರ್ಕಾರಿ ನೌಕರಿ, ಸಹಾಯಧನ, ಸೌಲಭ್ಯ ಮತ್ತಿತರ ಯೋಜನೆಗಳನ್ನು ಪಡೆದಿರುವ ಅಂಶ ಬಯಲಾಗಿದೆ.

ಪ್ರಸ್ತುತ 194 ಪ್ರಕರಣಗಳಲ್ಲಿ 34 ನ್ಯಾಯಾಲಯದ ವಿಚಾರಣೆಯಲ್ಲಿದ್ದು, 38 ಪ್ರಕರಣಗಳಲ್ಲಿ ತಡೆಯಾಜ್ಞೆ ತರಲಾಗಿದೆ. 11 ಪ್ರಕರಣಗಳಲ್ಲಿ ಎಫ್‌ಐಆರ್‌ ರದ್ದಾಗಿದೆ. 4 ಪ್ರಕರಣಗಳಲ್ಲಿ ಅಬೇಟ್‌ ಆಗಿದ್ದರೆ 1 ಪ್ರಕರಣಗಳದಲ್ಲಿ ಅಂತಿಮ ವರದಿ ಸಲ್ಲಿಸಲಾಗಿದೆ. 2 ಪ್ರಕರಣಗಳು ಮೇಲ್ಮನವಿ ಪ್ರಾಧಿಕಾರದ ಮುಂದಿವೆ.

ಹೀಗೆ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಒಟ್ಟು 95 ಪ್ರಕರಣಗಳು ದಾಖಲಾಗಿವೆ. ಬಹುತೇಕ ಪ್ರಕರಣಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರೆ ಪಡೆದು ಸರ್ಕಾರಿ ನೌಕರಿ ಪಡೆದಿರುವುದು ಸರ್ಕಾರದ ಅಂಕಿ ಅಂಶಗಳಿಂದಲೇ ಬಯಲಾಗಿದೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್‌ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!