ವಿಜಯಪುರ

ತಳವಾರ ಸಮುದಾಯದಿಂದ ಅಭಿನಂದನೆ ಸ್ವೀಕಾರ, ಸಚಿವ ಕೋಟ ಶ್ರೀನಿವಾಸ ಭರವಸೆ, ಉಸಿರು ಇರುವವರೆಗೂ ತಳವಾರ ಸಮಾಜ ಸ್ಮರಿಸುವೆ….

ಸರಕಾರ್‌ ನ್ಯೂಸ್‌ ಇಂಡಿ

ದಶಕಗಳ ಕನಸಾಗಿದ್ದ ತಳವಾರ ಸಮುದಾಯಕ್ಕೆ ಎಸ್‌ಟಿ ಸ್ಥಾನ ಮಾನಾ ನೀಡಿದ್ದು ಇನ್ಮುಂದೆ ತಳವಾರ ಸಮಾಜ ಮುಖ್ಯವಾಹಿನಿಗೆ ಬರಬೇಕು, ಎಲ್ಲರಂತೆ ಬದುಕು ಕಟ್ಟಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ತನ್ನ ಕಾಲ ಮೇಲೆ ತಾನು ನಿಲ್ಲಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇಂಡಿ ಪಟ್ಟಣದಲ್ಲಿ ಭಾನುವಾರ ಸಂಜೆ ತಳವಾರ ಸಮುದಾಯದಿಂದ ಹಮ್ಮಿಕೊಂಡಿದ್ದ ಅಭಿನದಂನಾ ಸಮಾವೇಶದಲ್ಲಿ ಸನ್ಮಾನ ಮತ್ತು ಗೌರವ ಸ್ವೀಕರಿಸಿ ಮಾತನಾಡಿದ ಅವರು, ತಳವಾರ ಸಮುದಾಯ ಅತ್ಯಂತ ಶೋಷಿತ ಸಮುದಾಯ. ಆರ್ಥಿಕವಾಗಿ ಹಿಂದುಳಿದ ಸಮಾಜ. ಇಂಥ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆ ಬಲವಾಗಿತ್ತು. ಸನ್ಮಾನ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯ ಫಲವಾಗಿ ಆ ಕಾರ್ಯ ಕೈಗೂಡಿದ್ದು ಈ ಸನ್ಮಾನವನ್ನು ಅವರಿಗೆ ತಲುಪಿಸುವುದಾಗಿ ತಿಳಿಸಿದರು.

ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಎಸ್‌ಟಿ ಕೊಡುವಲ್ಲಿ ಸಾಕಷ್ಟು ಅಡೆತಡೆಗಳು ಉಂಟಾದವು. ಈ ಬಗ್ಗೆ ಸಿಎಂ  ಬೊಮ್ಮಾಯಿ ಮತ್ತು ನಾನು ಸಾಕಷ್ಟು ಚರ್ಚಿಸಿ ನ್ಯಾಯ ಒದಗಿಸುವ ಸಂಕಲ್ಪ ಮಾಡಿದ  ಫಲವಾಗಿ ಇಂದು ಆ ಸಮಾಜಕ್ಕೆ ನ್ಯಾಯ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಏನೇ ಸಮಸ್ಯೆಗಳಿದ್ದೂ ಈ ಸಮಾಜದ ಬೆನ್ನೆಲುಬಾಗಿ ನಿಲ್ಲುತ್ತೇನೆ. ಉಸಿರು ಇರುವವರೆಗೂ ಸಮಾಜದ ಏಳಿಗೆಗಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

ಬಿಜೆಪಿ ಮುಖಂಡರಾದ ದಯಾಸಾಗರ ಪಾಟೀಲ, ಕಾಸುಗೌಡ ಬಿರಾದಾರ, ವಿವೇಕಾನಂದ ಡಬ್ಬಿ ಮಾತನಾಡಿ, ತಳವಾರ ಸಮುದಾಯದ ಏಳಿಗೆಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಮುಖಂಡರಾದ ಅನೀಲ ಜಮಾದಾರ, ವಿವೇಕಾನಂದ ಡಬ್ಬಿ, ಧರ್ಮರಾಜ ವಾಲೀಕಾರ ಮತ್ತಿತರರಿದ್ದರು. ಇಂಡಿ ತಾಲೂಕಿನ ಪ್ರತಿ ಹಳ್ಳಿಗಳಿಂದ ಜನ ಆಗಮಿಸಿದ್ದರು. ತಳವಾರ ಸಮುದಾಯಕ್ಕೆ ಎಸ್‌ಟಿ ನೀಡಿದ್ದಕ್ಕಾಗಿ ಸಚಿವ ಕೋಟ ಶ್ರೀನಿವಾಸಗೆ ಮನಃಪೂರ್ವಕವಾಗಿ ಅಭಿನಂದನೆ ಸಲ್ಲಿಸಿದರು.

(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ್‌ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!