ಅಮೃತ ಜ್ಯೋತಿ ಯೋಜನೆ, ಎಸ್ ಸಿ-ಎಸ್ ಟಿಗೆ ಉಚಿತ ವಿದ್ಯುತ್ ಪ್ರಮಾಣ ಎಷ್ಟು ಗೊತ್ತೆ?
ಸರಕಾರ್ ನ್ಯೂಸ್ ವಿಜಯಪುರ
ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಡತನ ರೇಖೆಗಿಂತ ಕೆಳಗಿರುವ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಅಮೃತ ಜ್ಯೋತಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.
ಸರ್ಕಾರದ ಆದೇಶದನ್ವಯ ಈ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು,ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುಲು ಅರ್ಹ ಫಲಾನುಭವಿಗಳು ತಮ್ಮ ವಿದ್ಯುತ್ ಬಿಲ್, ಆಧಾರ ಕಾರ್ಡ್, ಆರ್ ಡಿ ನಂಬರ್ ಹೊಂದಿರುವ ಜಾತಿ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಬುಕ್ ನೊಂದಿಗೆ ತಾವು ವಾಸಿಸುವ ವ್ಯಾಪ್ತಿಯಲ್ಲಿನ ಹೆಸ್ಕಾಂ ಶಾಖೆ ಅಥವಾ ಉಪ ವಿಭಾಗಗಳನ್ನು ಸಂಪರ್ಕಿಸಲು ವಿಜಯಪುರ ಹೆಸ್ಕಾಂನ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)