ನಮ್ಮ ವಿಜಯಪುರ

ಭೀಕರ ಬೈಕ್ ಅಪಘಾತ, ಇಬ್ಬರು ಸ್ಥಳದಲ್ಲಿಯೇ ಸಾವು

ಸರಕಾರ ನ್ಯೂಸ್ ಇಂಡಿ

ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ ಇಬ್ಬರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಜೋಡ ಗುಡಿಯ ಬಳಿ ಮಂಗಳವಾರ ಈ ಘಟನೆ ನಡೆದಿದೆ.
ಪ್ರಭು ಖ್ವಾಯಗೋಳ(34), ರಾಮಗೊಂಡ ಖ್ವಾಯಗೋಳ ಮೃತಪಟ್ಟಿರುವ ದುರ್ದೈವಿಗಳು.

ಅಪಘಾತಕ್ಕೆ ಬೈಕ್ ಸವಾರನ ಅತೀ ವೇಗವೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

(ಕ್ಷಣ ಕ್ಷಣ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!