ನಮ್ಮ ವಿಜಯಪುರ

ಸಾವಿನಲ್ಲಿ ಒಂದಾದ ಪ್ರೇಮಿಗಳು, ಜೊತೆಯಾಗಿ ನೇಣಿಗೆ ಶರಣು…!

ಸರಕಾರ ನ್ಯೂಸ್ ಬ.ಬಾಗೇವಾಡಿ

ತಾಲೂಕಿನ ಜೈನಾಪುರ ಗ್ರಾಮದ ಹೊರವಲಯದಲ್ಲಿ ಬುಧವಾರ ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳೀಯ ನಿವಾಸಿಗಳಾದ ರಾಕೇಶ್ ಅಂಗಡಿ (23) ಹಾಗೂ ಸಾವಿತ್ರಿ ಅಂಬಲಿ (19) ಮೃತ ಪ್ರೇಮಿಗಳು. ಕಳೆದ ಎರಡು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗಿದೆ ಎನ್ನಲಾಗಿದೆ. ಮನೆಯಿಂದ ಹೊರಹೋಗಿದ್ದ ಇಬ್ಬರೂ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್‌ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!