ನಮ್ಮ ವಿಜಯಪುರ

ಸಿಂದಗಿ ಜೆಡಿಎಸ್ ಅಭ್ಯರ್ಥಿ ನಿಧನ, ಶಿವಾನಂದ ಪಾಟೀಲಗೆ ಹೃದಯಾಘಾತ

ಸರಕಾರ ನ್ಯೂಸ್ ವಿಜಯಪುರ

ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ (54) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಿಂದಗಿ ಕ್ಷೇತ್ರದಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿದ್ದ ಶಿವಾನಂದ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆಗೊಂಡಿದ್ದರು.

ಶುಕ್ರವಾರ ನಾಗಠಾಣ ಕ್ಷೇತ್ರದಲ್ಲಿ ‌ನಡೆದ ಪಕ್ಷದ ಪಂಚರತ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿದ್ದರು. ಸಾಯಂಕಾಲ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು.

ರಾತ್ರಿ‌ 9 ರ ವೇಳೆ ಅಸ್ವಸ್ಥಗೊಂಡ ಶಿವಾನಂದ ಪಾಟೀಲ್ ಸೋಮಜಾಳ ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಹೃದಯಾಘಾತದಿಂದ ಶಿವಾನಂದ ಮೃತಪಟ್ಟರೆಂದು ವೈದ್ಯರ ಹೇಳಿದ್ದಾರೆ.
ಹದಿನಾರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಇವರು ಇತ್ತೀಚಿನ‌ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು.
ಪತ್ನಿ ವಿಶಾಲಾಕ್ಷಿ ಓರ್ವ ಪುತ್ರ ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ ಶಿವಾನಂದ ‌ಪಾಟೀಲ್ ಸೋಮಜಾಳ
ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ
ಸೋಮಜಾಳ ಗ್ರಾಮದ‌ರಾಗಿದ್ದಾರೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!